ಬೆಳಗ್ಗೆ ಜೈಲ್ – ಸಂಜೆ ಬೇಲ್; ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು

Date:

ಇತ್ತೀಚೆಗೆ ಬಿಡುಗಡೆಯಾದ ‘ಪುಷ್ಟ-2: ದಿ ರೂಲ್’ ಸಿನಿಮಾ ಪ್ರದರ್ಶನ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಸಿನಿಮಾದ ನಾಯಕ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ಇದೀಗ, ಅವರಿಗೆ ತೆಲಂಗಾಣ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

- Advertisement -

ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಈ ವೇಳೆ, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು. ಅವರ ಮಗನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಘಟನೆ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ರದ್ದು ಕೋರಿ ಅಲ್ಲು ಅರ್ಜುನ್ ವಿಚಾರಣಾ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ರದ್ದತಿಗೆ ನ್ಯಾಯಾಲಯ ನಿರಾಕರಿಸಿತ್ತು. ಈ ಬೆನ್ನಲ್ಲೇ, ಅವರನ್ನು ಶುಕ್ರವಾರ ಬೆಳಗ್ಗೆ ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ಅವರಿಗೆ ನಾಂಪಲ್ಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಆದಾಗ್ಯೂ, ಅಲ್ಲು ಅರ್ಜುನ್ ಹೈಕೋರ್ಟ್‌ ಮೊರೆ ಹೋಗಿದ್ದರು. ಇದೀಗ, ಮಧ್ಯಂತರ ಜಾಮೀನು ನೀಡಿ ತೆಲಂಗಾಣ ಹೈಕೋರ್ಟ್‌ ಆದೇಶಿಸಿದೆ.

ತನಿಖೆಗೆ ಸಹಕರಿಸುವಂತೆ ಮತ್ತು ನಡೆಯುತ್ತಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡದಂತೆ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಅರ್ಜುನ್‌ಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...