ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ 17 ಮಂದಿ ಸಹಚರರು ಪರಪ್ಪನ ಅಗ್ರಹಾರದಲ್ಲಿ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ.
ಹೊರಗಡೆ ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ ಜೈಲಿನಲ್ಲಿನ ದಿನಚರಿಯಿಂದ ಮಾನಸಿಕವಾಗಿ ಕುಗ್ಗಿ ಕುಗ್ಗಿಹೋಗಿದ್ದಾರಂತೆ.
ತಮಗೆ ಜೈಲಿನಲ್ಲಿನ ಊಟ, ಆಹಾರವನ್ನು ಸೇವಿಸಿ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಸರಿಯಾಗಿ ಊಟ, ನಿದ್ದೆ ಸೇರದೆ ಬಳಲುತ್ತಿದ್ದಾನೆ.
ಈ ಸುದ್ದಿ ಓದಿದ್ದೀರಾ? ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 10 ಆರೋಪಿಗಳ ಬೆರಳಚ್ಚು ಹೊಂದಾಣಿಕೆ?
ಮನೆ ಊಟ, ಹಾಸಿಗೆ ಹಾಗೂ ಓದಲು ಪುಸ್ತಕ ನೀಡುವಂತೆ ವಕೀಲರ ಮೂಲಕ ದರ್ಶನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಜೈಲಿನಲ್ಲಿ ನೀಡುತ್ತಿರುವ ಊಟ ಸೇವಿಸಿ ಅವರಿಗೆ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ – ಭೇದಿ ಉಂಟಾಗುತ್ತಿದೆ.
ಇದನ್ನು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದರ್ಶನ್ ವಕೀಲರು ಉಲ್ಲೇಖಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಜು.18ರವರೆಗೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಮುಂದುವರೆಯಲಿದ್ದಾರೆ.
