ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಸೇರಿ 7 ಮಂದಿಗೆ ಜಾಮೀನು

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೂ ಷರತ್ತುಬದ್ಧ ಜಾಮೀನು ನೀಡಿದೆ.

- Advertisement -

ದರ್ಶನ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ | ಕಾಲ್ತುಳಿತ ಪ್ರಕರಣ: ಪುಷ್ಪಾ 2 ನಾಯಕ ಅಲ್ಲು ಅರ್ಜುನ್‌ ಬಂಧನ

ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಜೊತೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೂ ಜಾಮೀನು ದೊರೆತಿದೆ.

ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಇಂದು ಏಳು ಮಂದಿಗೆ ಜಾಮೀನು ದೊರೆತಿದೆ. ಆ ಮೂಲಕ ಈ ಪ್ರಕರಣದ 11 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...