ವಿಮಾನ ಅಪಘಾತದಿಂದ ಪಾರಾದ ಧ್ರುವ ಸರ್ಜಾ, ಮಾರ್ಟಿನ್ ಚಿತ್ರತಂಡ: ಪುನರ್ಜನ್ಮ ಎಂದ ನಟ

Date:

ಸ್ಯಾಂಡಲ್‍ವುಡ್ ನಾಯಕ ನಟ ಧ್ರುವ ಸರ್ಜಾ ಸೇರಿದಂತೆ ಮಾರ್ಟಿನ್ ಚಿತ್ರ ತಂಡವಿದ್ದ ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ವಿಮಾನ ನಿಲ್ದಾಣ ತಲುಪಿದ್ದಾರೆ.

ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಹಾಡಿನ ಚಿತ್ರೀಕರಣಕ್ಕಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಇಂಡಿಗೋ ವಿಮಾನದಲ್ಲಿ  ತೆರಳುತ್ತಿತ್ತು. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದಾರೆ.

ಸೀಟುಗಳು ನಡುಗಿದೆ, ಪ್ರಯಾಣಿಕರು ಗಾಬರಿ ಆಗಿದ್ದಾರೆ. ಕೊನೆಗೆ ಪೈಲಟ್‍ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವಿಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ. ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದು, ಇದಕ್ಕೆ ಮಾರ್ಟಿನ್‌ ತಂಡವೂ ದನಿಗೂಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ಈ ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಎ ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದಾರೆ. ಈ ಬಗ್ಗೆ ನಟ ಧ್ರುವ ಸರ್ಜಾ ಸಹ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಮೊದಲ ಬಾರಿಗೆ ಸಾವನ್ನು ಎದುರಿಸಿ ಮತ್ತೆ ಜೀವ ಸಿಕ್ಕಂತಾಗಿದೆ. ಇದು ನನ್ನ ತಂದೆ ತಾಯಿಯರ, ನನ್ನ ವಿಐಪಿಗಳ ಮತ್ತು ನನ್ನ ದೇವರು ಚಿರು ಅಣ್ಣನ ಅವರ ಸಂಪೂರ್ಣ ಆಶೀರ್ವಾದದ ಫಲ. ಇದು ಪುನರ್ಜನ್ಮವಾಗಿದೆ. ನಮಗೆಲ್ಲರಿಗೂ ಜೀವನವನ್ನು ಪೂರ್ಣವಾಗಿ ಬದುಕಲು ಅವಕಾಶ ಮತ್ತೆ ಸಿಕ್ಕಿದೆ. ಜೈ ಆಂಜನೇಯ ಎಂದು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಪೋಸ್ಟ್ ಮಾಡಿದ್ದಾರೆ.

ಉದಯ್ ಕೆ ಮೆಹ್ತಾ ನಿರ್ಮಾಣದ ‘ಮಾರ್ಟಿನ್’ ಸಿನಿಮಾ ಕಳೆದೆರಡು ವರ್ಷಗಳ ಹಿಂದೆ ಸೆಟ್ಟೇರಿದ್ದು, ಬಹಳ ಅದ್ಧೂರಿಯಾಗಿ ಮೂಡಿ ಬರುತ್ತಿದೆ. 5 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾದಲ್ಲಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸುತ್ತಿದ್ದಾರೆ.

ಧ್ರವಸರ್ಜಾ
Dhruva sarja post
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೆನ್ನೈನಲ್ಲಿ ತಮಿಳು ನಟ ಅನುಮಾನಾಸ್ಪದ ಸಾವು

ತಮಿಳು ನಟ ಪ್ರದೀಪ್ ಕೆ ವಿಜಯನ್‌(39) ಅವರು ಚೆನ್ನೈನ ತಮ್ಮ ಮನೆಯಲ್ಲಿ...

ದರ್ಶನ್ ಪ್ರಕರಣ ಮುಚ್ಚಿ ಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ಯಾಂಡಲ್‌ವುಡ್...

ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣ: ಹತ್ಯೆಯ ಸಮರ್ಥನೆಗಿಳಿದ ಅಭಿಮಾನಿಗಳು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್...

ವಿವಾದಾತ್ಮಕ ಸಿನಿಮಾ ‘ಹಮಾರೆ ಬಾರಹ್’ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

ಇಸ್ಲಾಂ ನಂಬಿಕೆ ಹಾಗೂ ಮುಸ್ಲಿಂ ಮಹಿಳೆಯರ ವಿವಾಹದ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿರುವ...