ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ನಟ ಗಿರಿ ದಿನೇಶ್‌ಗೆ ಹಠಾತ್ ಹೃದಯಾಘಾತ

Date:

ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಅಭಿನಯದ ನವಗ್ರಹ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟ ಗಿರಿ ದಿನೇಶ್ ಹಠಾತ್ ಹೃದಯಾಘಾತದಿಂದ ‌ಸಾವನ್ನಪ್ಪಿದ್ದಾರೆ.

- Advertisement -

ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್​ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಗಿರಿ ದಿನೇಶ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ನಿಧನರಾಗಿದ್ದಾರೆ. ಅವರಿಗೆ ಕೇವಲ 45 ವಯಸ್ಸಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗಿರಿ ದಿನೇಶ್​ ನವಗ್ರಹ ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದರು. ಗಿರಿ ದಿನೇಶ್​ ಅವರು ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿ ಕೆಲ ಚಿತ್ರಗಳಲ್ಲಿ ನಟಿಸಿದ್ದರು.

ಹಠಾತ್ ಸಾವುಗಳ ಅಧ್ಯಯನಕ್ಕೆ ತಜ್ಞರು- ವಿಜ್ಞಾನಿಗಳ ಸಮಿತಿ ರಚನೆ

ಹಠಾತ್ ಸಾವುಗಳ ಕುರಿತಂತೆ ಮತ್ತು ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ತಿಳಿಸಿದ್ದರು.

ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಇತ್ತೀಚಿಗೆ ಮುಖ್ಯಮಂತ್ರಿಗಳಿಗೆ ಇ-ಮೇಲ್ ಮೂಲಕ ಪತ್ರ ಬರೆದು, ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದೆ. ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ. ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಕೋರಿದ್ದರು.

ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು. ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು.ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...