ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ್ ಅವರ ಬಗ್ಗೆ ಅಪಪ್ರಚಾರದ ಸುದ್ದಿ ಪ್ರಕಟವಾಗಿತ್ತು ಎನ್ನಲಾಗಿದೆ. ಹಾಗಾಗಿ, ಜಗ್ಗೇಶ್ ಅವರು ಕೋರ್ಟ್ ಮೊರೆ ಹೋಗಿದ್ದರು.
ಈ ಸುದ್ದಿ ಓದಿದ್ದೀರಾ? ಮಾ.1 ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ ಎಂದು ನ್ಯಾಯಾಲಯ ಆದೇಶಿಸಿದೆ. ಅಲ್ಲದೇ, ಇದು ತಾತ್ಕಾಲಿಕ ಆದೇಶವಾಗಿದೆ. ಮುಂದಿನ ವಿಚಾರಣೆ ಏಪ್ರಿಲ್ 25ಕ್ಕೆ ನಡೆಯಲಿದೆ. ಈ ಬಗ್ಗೆ ಜಗ್ಗೇಶ್ ಪರ ವಕೀಲರು ಮಾಹಿತಿ ನೀಡಿದ್ದಾರೆ.