ಧರ್ಮ, ದೇವರನ್ನು ಮುಂದಿಟ್ಟು ರಾಜಕಾರಣಿಗಳು ಪ್ರಶ್ನಾತೀತರಾಗುವುದು ನಾಡಿನ ಭವಿಷ್ಯಕ್ಕೆ ಅಪಾಯಕಾರಿ: ನಟ ಕಿಶೋರ್

Date:

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯ ನಡುವೆಯೇ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, “ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್‌ಗಿಂತಲೂ ಮುನ್ನ ಬಸವಣ್ಣನವರ ‘ಉಳ್ಳವರು ಶಿವಾಲಯ ಕಟ್ಟುವರು, ನಾನೇನು ಮಾಡಲಿ ಬಡವನಯ್ಯಾ’ ಎಂಬ ವಚನವೊಂದನ್ನು ಹಂಚಿಕೊಂಡಿದ್ದರು. ಆ ಬಳಿಕ ಈ ಪೋಸ್ಟ್ ಹಾಕಿರುವ ಅವರು, “ಧರ್ಮ, ದೇವರನ್ನು ಮುಂದಿಟ್ಟು ರಾಜಕಾರಣಿಗಳು ಪ್ರಶ್ನಾತೀತರಾಗುವುದು ನಾಡಿನ ಭವಿಷ್ಯಕ್ಕೆ ಅಪಾಯಕಾರಿ” ಎಂದು ಬರೆದುಕೊಂಡಿದ್ದಾರೆ.

“ಮಂದಿರ, ರಾಜರು ಮತ್ತು ರಾಜಕೀಯ ನಿಯಂತ್ರಣ ನಾವು ನೋಡದ್ದೇನಲ್ಲ. ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ.. ದೇವರ ಹೆಸರಲ್ಲಿ ಪೂಜಾರಿಯೊಂದಿಗೆ ಸೇರಿ ಜನರನ್ನು ನಿಯಂತ್ರಿಸಿ, ದೇಗುಲ ಕಟ್ಟಿಸಿ, ತಮ್ಮ ಹೆಸರು ಕೆತ್ತಿಸಿ, ದೇಗುಲದ ಶಿಲ್ಪಿಯ ಕೈ ಕತ್ತರಿಸಿ, ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿ, ಅಜರಾಮರರಾದ ದೊರೆಗಳು, ಉಧೋ ಉಧೋ ಎಂದ ಪ್ರಜೆಗಳು, ಭಟ್ಟಂಗಿಗಳು, ಧರ್ಮ ಮತ್ತು ದೇವರು ರಾಜಕಾರಣಿಗಳ ಕೈಗೆ ಹೋಗಿ ತಾವೂ ಪ್ರಶ್ನಾತೀತವಾಗಿ ಅವರನ್ನೂ ಪ್ರಶ್ನಾತೀತರನ್ನಾಗಿಸಿಬಿಡುವುದು ಸಂಸ್ಕೃತಿಯ ಚಲನಶೀಲತೆಗೆ, ನಾಡಿನ ಭವಿಷ್ಯಕ್ಕೆ ಅತೀ ಅಪಾಯಕಾರಿ” ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಪರೋಕ್ಷವಾಗಿ ಪ್ರಧಾನಿ ನರೇಂದ್ರಯವರನ್ನು ಟೀಕಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಪೋಸ್ಟ್‌ನ ಜೊತೆಗೆ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಬಿಡಿಸಿದ್ದ ವ್ಯಂಗ್ಯಚಿತ್ರವೊಂದನ್ನು ಕೂಡ ಹಂಚಿಕೊಂಡಿದ್ದಾರೆ. ಈ ವ್ಯಂಗ್ಯಚಿತ್ರದಲ್ಲಿ ಗೋದಿ ಮಾಧ್ಯಮಗಳು ರಾಮಮಂದಿರ ಉದ್ಘಾಟನೆ ಪ್ರಸಾರದ ಬಗ್ಗೆ ನಿರತವಾಗಿದ್ದರೆ, ದೇಶದಲ್ಲಿರುವ ಹಣದುಬ್ಬರ, ಬಡತನ, ನಿರುದ್ಯೋಗ, ಕೋಮುವಾದ ಹಾಗೂ ಬಂಡವಾಳಶಾಹಿ ವ್ಯವಸ್ಥೆಯ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ದೃಶ್ಯವನ್ನು ಚಿತ್ರಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿನಿಮಾ ವಿಮರ್ಶೆ | ನೋಡುಗನನ್ನು ನಜೀಬನ ಮರುಭೂಮಿಯ ಆಡಿನ ದೊಡ್ಡಿಗೆ ಕರೆದೊಯ್ಯುವ ‘ಆಡುಜೀವಿತಂ’

ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ದಾಖಲೆ ನಿರ್ಮಿಸಿದ ಕಾದಂಬರಿ 'ಆಡುಜೀವಿತಂ'(ಆಡು ಜೀವನ). ಇದು...

‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಮಿಳಿನ ಖ್ಯಾತ ಖಳನಟ ಡೇನಿಯಲ್...

ಸಿನಿ ಪ್ರಿಯರ ಮನಸ್ಸು ಗೆದ್ದ ಪೃಥ್ವಿರಾಜ್ ನಟನೆಯ ನೈಜ ಕಥೆಯಾಧರಿಸಿದ ‘ಆಡು ಜೀವಿತಂ’ ಸಿನಿಮಾ

ಬಹುನಿರೀಕ್ಷಿತ ಮಲಯಾಳಂ ಚಿತ್ರ 'ಆಡು ಜೀವಿತಂ' ಅಥವಾ 'ದಿ ಗೋಟ್‌ಲೈಫ್' ಮಾರ್ಚ್...

ನಿರ್ಮಾಪಕರ ಸಂಘದ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಲು ಹೈಕೋರ್ಟ್‌ ನಕಾರ

ಸುಳ್ಳು ಆಸ್ತಿ ಸಂಪಾದಿಸಿದ ಆರೋಪ ಹೊರಿಸಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ...