ಅಭಿವೃದ್ಧಿ ಹೆಸರಲ್ಲಿ ಕೆರೆ ನಾಶ : ಬಿಬಿಎಂಪಿ ವಿರುದ್ಧ ಕಿಶೋರ್‌ ಆಕ್ರೋಶ

Date:

ಸಾವಿರ ವರ್ಷಗಳ ಇತಿಹಾಸವಿರುವ ದೇವರಕೆರೆ

ಐತಿಹಾಸಿಕ ಕೆರೆಗೆ ಹರಿದು ಬರುತ್ತಿದೆ ಕೊಳಚೆ ನೀರು

ರಿಯಲ್‌ ಎಸ್ಟೇಟ್‌ ಹಾವಳಿಗೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೆರೆಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಕೂಗು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ ನಡುವೆ ನಗರದಲ್ಲಿರುವ ಸಾವಿರ ವರ್ಷಗಳ ಇತಿಹಾಸವುಳ್ಳ ʼದೇವರಕೆರೆʼಯನ್ನು ಬಿಬಿಎಂಪಿ ನಾಶ ಮಾಡುತ್ತಿದೆ ಎಂದು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಆರೋಪಿಸಿದ್ದು, ಕೆರೆಯ ರಕ್ಷಣೆಗೆ ಕರೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ ದೇವರಕೆರೆಗೆ ಕೊಳಚೆ ನೀರು ಹರಿದು ಬರುತ್ತಿರುವ ವಿಡಿಯೋವನ್ನು ತಮ್ಮ ʼಇನ್‌ಸ್ಟಾಗ್ರಾಂʼ ಖಾತೆಯಲ್ಲಿ ಹಂಚಿಕೊಂಡಿರುವ ಕಿಶೋರ್‌, “ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸಾವಿರ ವರ್ಷಗಳ ಇತಿಹಾಸವಿರುವ ದೇವರಕೆರೆ ಇದೆ. ಈ ಕೆರೆ ಹೊಯ್ಸಳರ ಕಾಲದ್ದು ಎಂದು ಪುರಾತತ್ವ ಇಲಾಖೆ ದೃಢಪಡಿಸಿದೆ. ಈ ಹಿಂದೆ ಅರಣ್ಯ ಇಲಾಖೆಯ ಸುಪರ್ಧಿಯಲ್ಲಿದ್ದ ಈ ಕೆರೆ ಸ್ವಾಭಾವಿಕವಾಗಿ ಶುದ್ಧ, ತಾಜಾ ನೀರಿನಿಂದ ಕೂಡಿತ್ತು. ಕಳೆದ 10 ವರ್ಷಗಳ ಹಿಂದೆ ಈ ಕೆರೆಯನ್ನು ಬಿಬಿಎಂಪಿಯ ಸುಪರ್ಧಿಗೆ ನೀಡಲಾಯಿತು. ಆದರೆ, ಬಿಬಿಎಂಪಿ ಅನಗತ್ಯ ಅಭಿವೃದ್ಧಿಯ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಿ ಈ ಐತಿಹಾಸಿಕ ಕೆರೆಯನ್ನು ಕೇವಲ 5 ವರ್ಷಗಳಲ್ಲೇ ನಾಶ ಮಾಡಿತು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

“ಕೆಲಸಕ್ಕೆ ಬಾರದ ಅಭಿವೃದ್ಧಿಯ ಹೆಸರಲ್ಲಿಇನ್ನೊಂದು ಕೆರೆಯನ್ನು ಕಳೆದುಕೊಳ್ಳಲು ಸಿದ್ಧರಾಗಿದ್ದೀರಾ? ಅಥವಾ ಪರಿಸ್ಥಿತಿ ಕೈ ಮೀರುವ ಮುನ್ನ ಸಂಬಂಧ ಪಟ್ಟವರನ್ನು ಪ್ರಶ್ನಿಸಿ, ಕ್ರಮಕ್ಕೆ ಆಗ್ರಹಿಸುತ್ತೀರಾ” ಎಂದು ಕೆರೆಯ ಸಂರಕ್ಷಣೆಗೆ ಕರೆ ನೀಡಿದ್ದಾರೆ.

ಕಿಶೋರ್‌ ಅವರು ತಮ್ಮ ʼಇನ್‌ಸ್ಟಾಗ್ರಾಂʼ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಕೊಳಚೆ ನೀರು ಕೆರೆಯನ್ನು ಸೇರುತ್ತಿರುವುದು ಸ್ಪಷ್ಟವಾಗಿದೆ. “ಕೇವಲ 10 ನಿಮಿಷಗಳ ಕಾಲ ಸುರಿದ ಮಳೆಗೆ ಎಷ್ಟು ದೊಡ್ಡ ಪ್ರಮಾಣದಲ್ಲಿ ಕೊಳಚೆ ನೀರು ಕೆರೆಯನ್ನು ತುಂಬಿಕೊಳ್ಳುತ್ತಿದೆ ನೋಡಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...