ನಟ ಚೇತನ್‌ ವೀಸಾ ರದ್ದು: ಸರ್ಕಾರದ ಅತಿರೇಕ ಎಂದ ಕಿಶೋರ್‌

Date:

ಸಹನಟನ ಬೆಂಬಲಕ್ಕೆ ನಿಂತ ಬಹುಭಾಷಾ ನಟ ಕಿಶೋರ್‌

ಕಾನೂನು ಹೋರಾಟಕ್ಕೆ ಮುಂದಾದ ʼಆ ದಿನಗಳುʼ ಚೇತನ್‌

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯ ಅವರ ವೀಸಾ ರದ್ದುಗೊಳಿಸಿದೆ. ಸರ್ಕಾರದ ಈ ನಡೆಗೆ ವ್ಯಾಪಾಕ ಖಂಡನೆ ವ್ಯಕ್ತವಾಗುತ್ತಿರುವಾಗಲೇ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚೇತನ್‌ ಅವರ ವೀಸಾ ಮತ್ತು ʼಓಸಿಐʼ ಕಾರ್ಡ್‌ (ಭಾರತೀಯ ಮೂಲದ ವಿದೇಶಿ ಪ್ರಜೆಗೆ ಭಾರತದಲ್ಲಿ ಅನಿರ್ದಿಷ್ಟ ಅವಧಿಯವರೆಗೆ ವಾಸಿಸಲು ಮತ್ತು ಕೆಲಸ ಮಾಡಲು ಇರುವ ವಲಸೆ ವ್ಯವಸ್ಥೆ)  ಅನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವ ಕುರಿತ ವರದಿಯನ್ನು ಉಲ್ಲೇಖಿಸಿ ಇನ್‌ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ಕಿಶೋರ್‌,” ʼಹಿಂದುತ್ವ’ ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ. ಆದರೆ, ʼಹಿಂದುತ್ವʼ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರ ದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೆ” ಎಂದಿದ್ದಾರೆ.

“ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?” ಎಂದು ಪ್ರಶ್ನೆಗಳನ್ನು ಹಾಕುವ ಮೂಲಕ ಚೇತನ್‌ ಬೆಂಬಲಕ್ಕೆ ನಿಂತಿದ್ದಾರೆ.

ತಮ್ಮ ವೀಸಾ ಮತ್ತು ʼಓಸಿಐʼ ಕಾರ್ಡ್‌ ಅನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿರುವ ಚೇತನ್‌ ಸದ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ವೀಸಾ ಮತ್ತು ʼಓಸಿಐʼ ಕಾರ್ಡ್‌ ರದ್ಧತಿ ಆದೇಶಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...