ಮಂತ್ರಿಯಾದ ಮಧು ಬಂಗಾರಪ್ಪ : ಶ್ರಮದ ಪ್ರತಿಫಲ ಎಂದ ಶಿವಣ್ಣ

Date:

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಧು ಬಂಗಾರಪ್ಪ

ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರ ಪರ ಪ್ರಚಾರ ಮಾಡಿದ್ದ ಶಿವಣ್ಣ

ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಕಿರಿಯ ಪುತ್ರ, ಸೊರಬ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಮಧು ಬಂಗಾರಪ್ಪ ಇದೇ ಮೊದಲ ಬಾರಿಗೆ ಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಧು ಬಂಗಾರಪ್ಪ ಸಚಿವರಾಗಿ ಆಯ್ಕೆಯಾದ ಬೆನ್ನಲ್ಲೇ ಅವರ ಕುಟುಂಬದಲ್ಲಿ ಸಂತದ ಮನೆ ಮಾಡಿದ್ದು, ಚುನವಾಣೆಯ‌ ಸಂದರ್ಭದಲ್ಲಿ ಮಧು ಅವರನ್ನು ಬೆಂಬಲಿಸಿದ್ದ ಅವರ ಸಂಬಂಧಿ, ಕನ್ನಡದ ಹಿರಿಯ ನಟ ಶಿವರಾಜ್‌ ಕುಮಾರ್ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮಧು ಬಂಗಾರಪ್ಪ ಮತ್ತು ತಮ್ಮ ಪತ್ನಿ ಗೀತಾ ಅವರೊಂದಿಗೆ ರಾಜಭವನಕ್ಕೆ ಆಗಮಿಸಿದ್ದ ಶಿವರಾಜ್‌ಕುಮಾರ್‌, “ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬ ಮಾತು ಇಂದು ನಿಜವಾಗಿದೆ. ಮಧು ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ತುಂಬಾ ಖುಷಿಯಾಗುತ್ತಿದೆ. ಮಧು ಖಂಡಿತವಾಗಿಯೂ ಜನಸೇವೆ ಮಾಡುತ್ತಾರೆ. ನಾನು ಇವತ್ತಿನಿಂದ ಅವರನ್ನು ನೋಡುತ್ತಿಲ್ಲ. ಯಾವುದೇ ಸ್ಥಾನಮಾನ ಇಲ್ಲದಿದ್ದಾಗಲೂ ಅವರು ಜನರಿಗೆ ಸಹಾಯ ಮಾಡಿದ್ದಾರೆ. ನೆರವಾಗುವ ಗುಣವಿದ್ದವರೇ ಒಳ್ಳೆಯ ನಾಯಕರಾಗಲು ಸಾಧ್ಯ. ಮಧು ಸಚಿವರಾಗಿ ಜನಪರ ಕೆಲಸಗಳನ್ನು ಮಾಡುತ್ತಾರೆ ಎಂಬ ನಂಬಿಕೆ ಇದೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿರುವ ಮಧು ಬಂಗಾರಪ್ಪ ಅವರ ಸಹೋದರಿ, ಶಿವರಾಜ್‌ ಕುಮಾರ್‌ ಪತ್ನಿ ಗೀತಾ, “ನನ್ನ ಸಹೋದರನಿಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಇದು ತೋರಿಸಿಕೊಳ್ಳಲಾಗದ ಖುಷಿ, ಆತ ಈ ಸ್ಥಾನಕ್ಕೆ ಬರಲು ಬಹಳ ಕಷ್ಟ ಪಟ್ಟಿದ್ದಾನೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಗರದಾಚೆಗೂ `ಡೇರ್‌ಡೆವಿಲ್‌ ಮುಸ್ತಾಫಾʼ ಸದ್ದು

ನಂತರ ಮಧು ಬಂಗಾರಪ್ಪ ಮಾತನಾಡಿ, “ನಮಗೆ ಅವಕಾಶ ಕೊಟ್ಟ ಕರ್ನಾಟಕದ ಜನತೆಗೆ ಧನ್ಯವಾದಗಳು. ವಿಶೇಷವಾಗಿ ಶಿವಣ್ಣ ಹಲವು ಕಾಂಗ್ರೆಸ್‌ ನಾಯಕರನ್ನು ಗೆಲ್ಲಿಸಲು ಪ್ರಯತ್ನ ಪಟ್ಟಿದ್ದಾರೆ. ಅವರಿಗೆ ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...