ಹುಟ್ಟುಹಬ್ಬಕ್ಕೆ ʼಸಂಜು ವೆಡ್ಸ್‌ ಗೀತಾ-2ʼ ಸಿನಿಮಾ ಘೋಷಿಸಿದ ಶ್ರೀನಗರ ಕಿಟ್ಟಿ

Date:

46ನೇ ವಸಂತಕ್ಕೆ ಕಾಲಿಟ್ಟ ಶ್ರೀನಗರ ಕಿಟ್ಟಿ

- Advertisement -

ಸಂಜು ವೆಡ್ಸ್‌ ಗೀತಾ-2 ಚಿತ್ರತಂಡದ ಭಾಗವಾದ ರಮ್ಯಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶ್ರೀನಗರ ಕಿಟ್ಟಿ ಇಂದು 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕಿಟ್ಟಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಾಶಯ ಕೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕಿಟ್ಟಿ ಅವರ ಮುಂದಿನ ಸಿನಿಮಾ ಕೂಡ ಘೋಷಣೆಯಾಗಿದೆ.

ದಶಕದ ಹಿಂದೆ ಶ್ರೀನಗರ ಕಿಟ್ಟಿ ಮತ್ತು ರಮ್ಯಾ ಕಾಂಬಿನೇಶನ್‌ನಲ್ಲಿ ತೆರೆಕಂಡಿದ್ದ ʼಸಂಜು ವೆಡ್ಸ್‌ ಗೀತಾʼ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿತ್ತು. ಪ್ರೇಕ್ಷಕರು ಮತ್ತು ವಿಮರ್ಶಕರಿಂದಲೂ ಈ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಇದೇ ಚಿತ್ರತಂಡ ಮತ್ತೆ ಒಂದಾಗಿದ್ದು, ಬರೋಬ್ಬರಿ 12 ವರ್ಷಗಳ ಬಳಿಕ ʼಸಂಜು ವೆಡ್ಸ್‌ ಗೀತಾ-2ʼ ಸಿನಿಮಾ ಘೋಷಣೆ ಮಾಡಿದೆ.

ಈ ಹಿಂದೆ ʼಸಂಜು ವೆಡ್ಸ್‌ ಗೀತಾʼ ಚಿತ್ರದ ಎಲ್ಲ ಹಾಡುಗಳು ದೊಡ್ಡ ಮಟ್ಟದ ಜನಪ್ರಿಯ ಗಳಿಸಿದ್ದವು. ಈ ಹಾಡುಗಳನ್ನು ರಚಿಸಿದ್ದ ಕನ್ನಡದ ಖ್ಯಾತ ಚಿತ್ರಸಾಹಿತಿ ಕವಿರಾಜ್‌ ಅವರೇ ʼಸಂಜು ವೆಡ್ಸ್‌ ಗೀತಾ-2ʼ ಚಿತ್ರದ ಬಗ್ಗೆ ಸುಳಿವು ನೀಡಿದ್ದು, ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹೊಸ ಪೋಸ್ಟರ್‌ ಹಂಚಿಕೊಂಡಿದ್ದಾರೆ.

ನಾಗಶೇಖರ್‌ ಅವರೇ ಈ ಚಿತ್ರಕ್ಕೆ ಆ್ಯಕ್ಷನ್ ಕಟ್‌ ಹೇಳುತ್ತಿದ್ದು, ಕಿಟ್ಟಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದುವರಿದ ಭಾಗಕ್ಕೆ ನಾಯಕಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗಳು ಸದ್ಯ ಸಿನಿರಸಿಕರಲ್ಲಿ ಮನೆ ಮಾಡಿದೆ. ಮೊದಲ ಭಾಗದಲ್ಲಿ ನಾಯಕಿಯಾಗಿ ಮಿಂಚಿದ್ದ ರಮ್ಯಾ ಈ ಚಿತ್ರವನ್ನು ತಮ್ಮ ಬ್ಯಾನರ್‌ನಡಿಯಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ. ಮುಂಬರುವ ಚಳಿಗಾಲಕ್ಕೆ ಸಿನಿಮಾದ ಶೂಟಿಂಗ್‌ ಪ್ರಾರಂಭಗೊಳ್ಳಲಿದ್ದು, 2024ರ ಡಿಸೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...