ನಟಿ ಜಾನ್ವಿ ಕಪೂರ್ ವಿಡಿಯೋ ಮಾರ್ಫ್‌ ಮಾಡಿ ವಿಕೃತಿ; ‘ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ’: ಜೂನಿಯರ್ ಎನ್‌ಟಿಆರ್ ಎಚ್ಚರಿಕೆ

Date:

ನಟಿ ಜಾನ್ವಿ ಕಪೂರ್ ಮತ್ತು ನಟ ಜೂನಿಯರ್ ಎನ್‌ಟಿಆರ್‌ ಅಭಿನಯದ ಇತ್ತೀಚಿನ ಸೂಪರ್‌ಹಿಟ್ ಚಿತ್ರ ‘ದೇವರ’. ಈ ಸಿನಿಮಾ ಸುಪ್ರಸಿದ್ದ ‘ಚುಟ್ಟಮಲ್ಲೆ’ ಹಾಡಿನಲ್ಲಿನ ಜಾನ್ವಿ ಕಪೂರ್ ಅವರ ದೃಶ್ಯಗಳನ್ನು ಕೃತಕ ಬುದ್ಧಿಮತ್ತೆ ಬಳಸಿ, ಅಶ್ಲೀಲವಾಗಿ ಆರ್ಫಿಂಗ್‌ ಮಾಡಿ, ಕೆಲವು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಕೃತಿಯ ವಿರುದ್ಧ ನಟ ಜೂನಿಯರ್ ಎನ್‌ಟಿಆರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಜೂನಿಯರ್ ಎನ್‌ಟಿಆರ್‌, “ಈ ಕೃತ್ಯವು ಅಸಹ್ಯಕರ, ವಿಕೃತ ಮತ್ತು ನಾಚಿಕೆಗೇಡು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

“ಮಹಿಳೆಯರನ್ನು ತಾಯಿ ಮತ್ತು ದೇವತೆಯಾಗಿ ಪೂಜಿಸುವ ‘ಮಾತೃದೇವೋ ಭವ’ ತತ್ವದ ನಮ್ಮ ಸಂಸ್ಕೃತಿಯಲ್ಲಿ, ಕೆಲವರು ಇಷ್ಟೊಂದು ಕೆಳಮಟ್ಟಕ್ಕೆ ಇಳಿದು ತಂತ್ರಜ್ಞಾನವನ್ನು ಮಹಿಳೆಯರ ತೇಜೋವಧೆಗೆ ಬಳಸಿಕೊಳ್ಳುತ್ತಿರುವುದು ಅತ್ಯಂತ ಅಮಾನವೀಯ” ಎಂದು ಕಿಡಿಕಾರಿದ್ದಾರೆ.

ಈ ಲೇಖನ ಓದಿದ್ದೀರಾ?: ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

“ಈ ಅಶ್ಲೀಲ ವೀಡಿಯೋವನ್ನು ರಚಿಸಿದವರು ಮತ್ತು ಅದನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ವಿಕೃತಿ ಮರೆದಿರುವ ಪ್ರತಿಯೊಬ್ಬರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಇಂದು ಮತ್ತೊಬ್ಬರಿಗೆ ಸಂಭವಿಸಿದ ಈ ಘಟನೆ ನಾಳೆ ನಿಮ್ಮ ಮನೆಯ ತಾಯಿ, ತಂಗಿ, ಹೆಂಡತಿ ಅಥವಾ ಮಗಳಿಗೂ ಎದುರಾಗಬಹುದು. ಇಂತಹ ವಿಕೃತ ವೀಡಿಯೋಗಳನ್ನು ಯಾರೂ ವೀಕ್ಷಿಸಬಾರದು, ಹಂಚಿಕೊಳ್ಳಬಾರದು ಹಾಗೂ ಪ್ರೋತ್ಸಾಹಿಸಬಾರದು” ಎಂದು ಹೇಳಿದ್ದಾರೆ.  ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

“ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿರುವ ಎಐ ದುರ್ಬಳಕೆಯ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣವೇ ಜಾಗೃತಗೊಂಡು ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಬೇಕು” ಎಂದೂ ಅವರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...

ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...