‘ಪುಷ್ಪಾ-2’ ನಟನೆಗಾಗಿ ಅಲ್ಲು ಅರ್ಜುನ್‌ಗೆ 300 ಕೋಟಿ ರೂ. ಸಂಭಾವನೆ; ರಶ್ಮಿಕಾ ಪಡೆದದ್ದೆಷ್ಟು?

Date:

ತೆಲುಗು ಚಿತ್ರರಂಗದ ಸ್ಟಾರ್‌ ನಟ ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಚಿತ್ರ ‘ಪುಷ್ಪಾ-2: ದ ರೂಲ್’ ಸಿನಿಮಾ ಬಿಡುಗಡೆಯಾಗಿದೆ. ಈಗಾಗಲೇ, ಮುಂಗಡ ಬುಕಿಂಗ್ ಮತ್ತು ಮೊದಲ ದಿನ ಕಲೆಕ್ಷನ್‌ನಿಂದಾಗಿ 250 ಕೋಟಿ ರೂ. ಗಳಿಸಿದೆ ಎಂದು ವರದಿಯಾಗಿದೆ. ಈ ನಡುವೆ, ಚಿತ್ರದಲ್ಲಿ ನಟಿಸಿದ ಕಲಾವಿದರ ಸಂಭಾವನೆ ವಿಚಾರ ಗಮನ ಸೆಳೆಯುತ್ತಿದೆ. ಸಿನಿಮಾದಲ್ಲಿನ ನಟನೆಗಾಗಿ ಅಲ್ಲು ಅರ್ಜುನ್‌ ಅವರು 300 ಕೋಟಿ ರೂ. ಪಡೆದಿದ್ದಾರೆ. ಅವರೊಂದಿಗೆ ಬಣ್ಣ ಹಚ್ಚಿದ್ದ ನಾಯಕ ನಟಿ ರಶ್ಮಿಕಾ ಮಂದಣ್ಣ ಅವರು 10 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.

- Advertisement -

ಪುಷ್ಪಾ-2 ಸಿನಿಮಾವನ್ನು 400ರಿಂದ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ನಿರ್ಮಾಣ ಸಂಸ್ಥೆ ಮೈತ್ರಿ ಮೂವೀಸ್‌ ಹೇಳಿಕೊಂಡಿದೆ. ಈ ಪೈಕಿ, ಕಲಾವಿದರ ಸಂಭಾವನೆಗಾಗಿಯೇ ಹೆಚ್ಚು ಹಣವನ್ನು ಚಿತ್ರತಂಡ ಖರ್ಚು ಮಾಡಿದೆ. ಅಲ್ಲು ಅರ್ಜುನ್‌ಗೆ 300 ಕೋಟಿ ರೂ., ರಶ್ಮಿಕಾಗೆ 10 ಕೋಟಿ ರೂ. ಕೊಟ್ಟಿದೆ. ಅಲ್ಲದೆ, ಬನ್ವರ್ ಸಿಂಗ್ ಶೆಖಾವತ್ ಪಾತ್ರದಲ್ಲಿ ನಟಿಸಿರುವ ನಟ ಫಹಾದ್ ಫಾಸಿಲ್ ಅವರಿಗೆ 8 ಕೋಟಿ ರೂ. ನೀಡಿದೆ. ‘ಕಿಸಕ್’ ಹಾಡಿನಲ್ಲಿ ಮಾತ್ರವೇ ಕಾಣಿಸಿಕೊಂಡಿರುವ ನಟಿ ಶ್ರೀಲೀಲಾ ಅವರಿಗೆ 2 ಕೋಟಿ ರೂ. ನೀಡಿದೆ. ಈ ಹಿಂದೆ, ಪುಷ್ಪ-1ರಲ್ಲಿ ‘ಊ ಅಂಟಾವ’ ಹಾಡಿನಲ್ಲಿ ಕಾಣಿಸಿಕೊಂಡಿದ್ದ ನಟಿ ಸಮಂತಾ ಅವರು 5 ಕೋಟಿ ರೂ. ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಥಿಯೇಟರ್‌ಗಳಲ್ಲಿ ಅಬ್ಬರಿಸುತ್ತಿರುವ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದಾಗ್ಯೂ, ಸಿನಿಮಾ ಬಿಡುಗಡೆಗೂ ಮುನ್ನವೇ ಮುಂಗಡ ಬುಕಿಂಗ್‌ನಲ್ಲಿಯೇ 100 ಕೋಟಿ ರೂ. ಗಳಿಸಿದೆ. ಮೊದಲ ದಿನದ ಕಲೆಕ್ಷನ್‌ನಲ್ಲಿ 150 ಕೋಟಿ ರೂ. ಬಾಚಿಕೊಂಡಿದೆ. ಅಲ್ಲದೆ, ಮಾಧ್ಯಮಗಳ ವರದಿಗಳ ಪ್ರಕಾರ, OTT ಹಕ್ಕುಗಳು, ಉಪಗ್ರಹ ಹಕ್ಕುಗಳು, ಹಾಡುಗಳ ಹಕ್ಕುಗಳ ಮಾರಾಟದ ಮೂಲಕವೇ ಸುಮಾರು 1,000 ಕೋಟಿ ರೂ. ಗಳಿಸಿದೆ.

ಆಂಧ್ರಪ್ರದೇಶದಲ್ಲಿ ಪುಷ್ಪಾ-2 ಸಿನಿಮಾ ಕಾರಣಕ್ಕಾಗಿಯೇ ಟಿಕೆಟ್‌ ದರ ಹೆಚ್ಚಿಸಲು ಆಂಧ್ರ ಸರ್ಕಾರ ಅನುಮತಿ ನೀಡಿದ್ದು, ಟಿಕೆಟ್‌ ದರವನ್ನು ಮೂರು/ನಾಲ್ಕು ಪಟ್ಟು ಹೆಚ್ಚಿಸಲಾಗಿದೆ. ಸಿನಿಮಾ ಭಾರತದಾದ್ಯಂತ ಸುಮಾರು 40,000 ಸ್ಕ್ರೀನ್‌ಗಳಲ್ಲಿ ಪ್ರದರ್ಶನವಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...