ಬಿಜೆಪಿ ಸೋಲಿಗೆ ಆಡಳಿತ ವಿರೋಧಿ ಅಲೆ ಕಾರಣ : ಸಂಸದೆ ಸುಮಲತಾ ಅಂಬರೀಶ್‌

Date:

ಟ್ರೋಲ್‌ ಪಡೆಗಳ ವಿರುದ್ಧ ಸುಮಲತಾ ಅಂಬರೀಶ್‌ ಗರಂ

ನನ್ನ ಕೆಲಸದ ಲಾಭ ಕಾಂಗ್ರೆಸ್‌ಗೆ ದಕ್ಕಿದೆ ಎಂದ ಮಂಡ್ಯ ಸಂಸದೆ

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದರು. ಮತ್ತೊಮ್ಮೆ ಸ್ವಾಭಿಮಾನದ ಅಸ್ತ್ರವನ್ನು ಬಳಸಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದಾಗಿ ಪಣ ತೊಟ್ಟಿದ್ದರು. ಪ್ರಧಾನಿ ಮೋದಿ, ಅಮಿತ್‌ ಶಾ, ಯೋಗಿ ಆದಿತ್ಯನಾಥ್‌ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಮಂಡ್ಯದಲ್ಲಿ ಸುಮಲತಾ ಜೊತೆಗೂಡಿ ಅಬ್ಬರದ ರೋಡ್‌ ಶೋ, ಸಮಾವೇಶಗಳನ್ನು ನಡೆಸಿದರೂ ಇಡೀ ಜಿಲ್ಲೆಯಲ್ಲಿ ಬಿಜೆಪಿಯ ಒಬ್ಬ ಅಭ್ಯರ್ಥಿ ಕೂಡ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಮಂಡ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬೆನ್ನಲ್ಲೇ ಹಲವು ನೆಟ್ಟಿಗರು ಸುಮಲತಾ ಅವರನ್ನು ಟ್ರೋಲ್‌ ಮಾಡುತ್ತಿದ್ದಾರೆ. ತಮ್ಮನ್ನು ಗುರಿಯಾಗಿಸಿ ಟ್ರೋಲ್‌ ಮಾಡುತ್ತಿರುವವರಿಗೆ ಪ್ರತಿಕ್ರಿಯಿಸಿರುವ ಸಂಸದೆ ಟ್ವಿಟರ್‌ನಲ್ಲಿ ಬಹಿರಂಗ ಪತ್ರವನ್ನು ಹಂಚಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂಸದೆ ಸುಮಲತಾ ಅಂಬರೀಶ್‌ ಪತ್ರದ ಸಾರಾಂಶ

ಕಪೋಲಕಲ್ಪಿತ ವರದಿ ಮಾಡುತ್ತಿರುವ ಕೆಲ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಿಗೆ ಇದು ನನ್ನ ಪ್ರತ್ಯುತ್ತರ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 2023ರ ಮಾರ್ಚ್ 10ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಚಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಿತು. ಪಕ್ಷವು ಘೋಷಣೆ ಮಾಡಿದ ನನ್ನ ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ʼಫಸ್ಟ್ ಟೈಮ್ʼ ಚುನಾವಣೆ ಎದುರಿಸಿದವರು. ಆದರೂ ಎದುರಾಳಿಗಳ ವಿರುದ್ಧ ಸಮರ್ಥವಾಗಿ ಹೋರಾಟ ಮಾಡಿದ್ದಾರೆ. ಅಲ್ಲದೇ ಪ್ರಚಾರಕ್ಕೆ ನಮಗಿದ್ದದ್ದು ಎರಡ್ಮೂರು ವಾರಗಳಷ್ಟೇ ಸಮಯ. ಆದರೂ ಹೊಸ ಪಡೆಯನ್ನು ಕಟ್ಟಿಕೊಂಡು ಹೋರಾಟ ಮಾಡಿದ್ದೇವೆ. ಪರಿಣಾಮ ಮೊದಲ ಬಾರಿಗೆ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು ಮತ್ತು ಮಳವಳ್ಳಿಯಲ್ಲಿ ಬಿಜೆಪಿಗೆ ಮತಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಆದರೆ, ಮಂಡ್ಯದಲ್ಲಿ ಮಾತ್ರವಲ್ಲ ಕರ್ನಾಟಕದಲ್ಲೇ ಆಡಳಿತ ವಿರೋಧಿ ಅಲೆ ಮತ್ತು ಕಾಂಗ್ರೆಸ್ ಅಲೆ ಹೆಚ್ಚಾಗಿದ್ದರಿಂದ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ. ಹಾಗಾಗಿ ಪಕ್ಷಕ್ಕೆ ಆಗಿರುವ ಸೋಲನ್ನು ಒಪ್ಪಿಕೊಂಡು, ಆತ್ಮಾವಲೋಕನದ ಜೊತೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಳ್ಳುತ್ತೇವೆ.

ಮಾರ್ಚ್ 10ರಂದು ನಾನು ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ನಾನು ರಿಸ್ಕ್ ತಗೆದುಕೊಳ್ಳುತ್ತಿದ್ದೇನೆ. ಇದು ರಿಸ್ಕ್ ಎಂದು ನನಗೆ ಗೊತ್ತಿದೆ’ ಎಂದು ಮಾಧ್ಯಮಗಳ ಮುಂದೆ ಅವತ್ತೇ ಸ್ಪಷ್ಟಪಡಿಸಿದ್ದೆ. ಪಕ್ಷದ ಸೋಲಿಗೆ ಇಷ್ಟೆಲ್ಲ ಕಾರಣಗಳು ಇದ್ದರೂ, ನೀವು ನಿಮ್ಮದೇ ಆದ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತೀದ್ದೀರಿ, ಸುಳ್ಳು ಸಂದೇಶಗಳನ್ನು ಹರಡುತ್ತಿದ್ದೀರಿ, ನೀವೇ ಸುದ್ದಿಯನ್ನು ಸೃಷ್ಟಿಸಿ ಜನರಿಗೆ ತಪ್ಪು ಮಾಹಿತಿಯನ್ನು ನೀಡುವುದು ಎಷ್ಟು ಸರಿ? ನಾನು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಲು ಇಷ್ಟಪಡುತ್ತೇನೆ. ಮುಂದಿನ ಚುನಾವಣೆಯಲ್ಲಿ ನನ್ನ ಭವಿಷ್ಯ ಅಥವಾ 24 ಗಂಟೆ ರಾಜಕಾರಣದ ಲೆಕ್ಕಾಚಾರ ಹಾಕುತ್ತಾ ಕೂರುವವಳು ನಾನಲ್ಲ. ನನ್ನ ಸ್ವಾರ್ಥದ ಬಗ್ಗೆ ಮಾತ್ರ ಯೋಚಿಸಿದ್ದರೆ ಬಹುಶಃ ನನ್ನ ನಿಲುವು ಬೇರೆಯದ್ದಾಗಿಯೇ ಇರುತ್ತಿತ್ತು. ಆ ರೀತಿ ಮಾಡುವುದಕ್ಕೆ ನಾನು ಇಷ್ಟ ಪಡುವುದಿಲ್ಲ. ನನ್ನ ಆತ್ಮಸಾಕ್ಷಿ ಆಧಾರದ ಮೇಲೆ ನಾನು ನನ್ನ ನಿರ್ಧಾರಗಳನ್ನು ತಗೆದುಕೊಳ್ಳುತ್ತೇನೆ ಮತ್ತು ನನ್ನ ಕ್ಷೇತ್ರಕ್ಕೆ ಒಳ್ಳೆದಾಗುವಂತಹ ಯೋಚನೆಯನ್ನು ಮಾತ್ರ ಮಾಡುತ್ತೇನೆ. ನಾನು ಎಂದಿಗೂ ನನ್ನ ನಿರ್ಧಾರಕ್ಕೆ ಬದ್ಧಳಾಗಿರುತ್ತೇನೆ. ನಮ್ಮ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ಯಾವತ್ತಿಗೂ ನಂಬಿಕೆ ಇರಲಿದೆ ಎಂದು ಮತ್ತೆ ಪುನರುಚ್ಚಿಸುತ್ತೇನೆ. ನಿಮ್ಮ ಗ್ರಹಿಕೆಗಳನ್ನು ದಯವಿಟ್ಟು ಸರಿಪಡಿಸಿಕೊಳ್ಳಿ.

ಇಲ್ಲಿ ಪ್ರಮುಖವಾಗಿ ಒಂದು ಅಂಶವನ್ನು ಮರೆಯಬಾರದು. ನನ್ನ ಸ್ವಾಭಿಮಾನಿ ಕ್ಷೇತ್ರದಲ್ಲಿ ನಾನು ಈವರೆಗೂ ಏಕಾಂಗಿಯಾಗಿ ಹೋರಾಟ ಮಾಡುತ್ತಿರುವುದು ಕ್ಷೇತ್ರದ ಭ್ರಷ್ಟ ಹಾಗೂ ದುರಹಂಕಾರಿ ವರ್ತನೆಯ ಶಾಸಕರ ವಿರುದ್ಧ. ನನ್ನ ಈ ಸತತ ಹೋರಾಟವನ್ನು ಗಮನಿಸಿರುವ ನನ್ನ ಸ್ವಾಭಿಮಾನಿ ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಆ ಪಾರ್ಟಿಯಲ್ಲಿ ಗೆದ್ದಿರುವುದು ಒಬ್ಬರೇ ಒಬ್ಬರು. ಅವರೂ ಹೊಸಬರು. ಹೌದು, ನನ್ನ ನ್ಯಾಯಯುತ ಹೋರಾಟದ ಲಾಭವನ್ನು ನನ್ನ ಜಿಲ್ಲೆಯ ಕಾಂಗ್ರೆಸ್ ಪಡೆದುಕೊಂಡಿದೆ. ಅದು ನನ್ನ ಸ್ವಾಭಿಮಾನಿ ಮಂಡ್ಯದ ಜನರೇ ನೀಡಿದ ಜನಾದೇಶವಾಗಿದ್ದರಿಂದ ಅದನ್ನು ಗೌರವಿಸುತ್ತೇನೆ. ರಾಜಕೀಯ, ರಾಜಕಾರಣ ಮತ್ತು ತಂತ್ರಗಳು ಒಂದು ನಿರ್ದಿಷ್ಟ ಮಟ್ಟಿಗೆ ಕೆಲಸ ಮಾಡುತ್ತವೆ ಎಂದು ನಾನು ದೃಢವಾಗಿ ನಂಬುತ್ತೇನೆ. ಆದರೆ, ಅಂತಿಮವಾಗಿ ಯಾವುದೇ ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ ವ್ಯಕ್ತಿ ಗೆಲ್ಲಬೇಕು ವಿನಃ ಪಕ್ಷಗಳು ಅಥವಾ ನಾಯಕರಲ್ಲ.

ಸದ್ಯ ನನ್ನ ಮುಂದೆ ಎರಡು ಗುರಿಗಳಿವೆ. ಮುಂದೆ ಮತ್ತೊಂದು ಮಹಾ ಚುನಾವಣೆ ಇದೆ. ನನ್ನ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸುತ್ತೇವೆ. ಬಿಜೆಪಿ ಪಕ್ಷವು ಹಿಂದೆಂದಿಗಿಂತಲೂ ಬಲವಾಗಿ ಮತ್ತು ಅಚ್ಚರಿಯ ರೀತಿಯಲ್ಲಿ ಪುಟಿದೇಳಲಿದೆ ಮತ್ತು ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಎನ್ನುವುದು ನನ್ನ ಅಚಲ ನಂಬಿಕೆಯಾಗಿದೆ. ಮತ್ತೊಂದು ಸಲ ಹೇಳುತ್ತೇನೆ ನನ್ನ ನಿರ್ಧಾರ ಮತ್ತು ಪರಿಣಾಮಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಹಾಗಾಗಿ ಈ ವಿಷಯದಲ್ಲಿ ನನಗೆ ವಿಷಾದವಿಲ್ಲ.

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಬೊಮ್ಮಾಯಿ ಮಾಮನ ದುರಹಂಕಾರ: ನೋವು ತೋಡಿಕೊಂಡ ಪವನ್ ಕುಮಾರ

ಕೆಟ್ಟ ಹಾಗೂ ನೆಗೆಟಿವ್ ಸುದ್ದಿ ಪ್ರಸಾರ ಮಾಡುವವರ ಜೊತೆಗೆ ಟ್ರೋಲ್ ಮಾಡುವವರು ದಯವಿಟ್ಟು ಆರೋಗ್ಯವಂಥ ಮನಸ್ಸು ಬೆಳೆಸಿಕೊಳ್ಳಿ. ವಿಶ್ರಾಂತಿ ತಗೆದುಕೊಂಡು ಆರೋಗ್ಯ ವೃದ್ಧಿಸಿಕೊಳ್ಳಿ. ನಿಮ್ಮ ಟ್ರೋಲ್ ಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತವೆಯೇ ಹೊರತು, ಅದರಿಂದ ನನ್ನ ಕೆಲಸಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಿಮ್ಮ ಅಗ್ಗದ ಮಾತುಗಳು, ನಿಂದನೆಯ ನುಡಿಗಳು, ನೀವು ಬಳಸುವ ಪದಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತಿವೆ. ದಯವಿಟ್ಟು ನಿಮ್ಮ ಈ ನಡವಳಿಕೆಯ ಮೂಲಕ ನಿಮ್ಮ ತಂದೆ ತಾಯಿಯನ್ನು ಅವಮಾನಿಸಬೇಡಿ. ಆರೋಗ್ಯವಂತ ಮತ್ತು ಸಕಾರಾತ್ಮಕ ಟೀಕೆ, ಟಿಪ್ಪಣಿ, ಚರ್ಚೆಗಳಿಗೆ ಯಾವತ್ತಿಗೂ ಈ ನೆಲದಲ್ಲಿ ಸ್ವಾಗತವಿದೆ. ನೀವು ಅಂದುಕೊಂಡಿರುವ ವಿಜಯವನ್ನು ಆನಂದಿಸಿ ಮತ್ತು ಆಚರಿಸಿ. ಮುಂದಿನ ಬಾರಿ ಪ್ರಬಲ ಹೋರಾಟಕ್ಕೆ ಸಿದ್ಧರಾಗಿರಿ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರೋಗ್ಯದಲ್ಲಿ ದಿಢೀರ್ ಏರುಪೇರು: ಬಿಗ್‌ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಆಗಿ...

ಅಶ್ಲೀಲ ವಿಡಿಯೋ ಪ್ರಸಾರ : 18 ಒಟಿಟಿ, 19 ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಕೇಂದ್ರ

ಹಲವು ಎಚ್ಚರಿಕೆಗಳ ನಡುವೆಯೂ ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದ 18 ಒಟಿಟಿ...

ತುಮಕೂರು | ತುಕಾಲಿ ಸಂತೋಷ್‌ ಕಾರು ಅಪಘಾತ; ಆಟೋ ಚಾಲಕ ಸಾವು

ಬಿಗ್‌ಬಾಸ್‌ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ...

ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ...