ಹೃದಯಾಘಾತ ತಡೆಯಲು ಪುನೀತ್ ಹೆಸರಲ್ಲಿ ‘ಅಪ್ಪು ಯೋಜನೆ’ ಜಾರಿ : ಸಚಿವ ದಿನೇಶ್ ಗುಂಡೂರಾವ್

Date:

  • ಸಾರ್ವಜನಿಕ ಸ್ಥಳಗಳಲ್ಲಿ ಹೃದಯಾಘಾತವಾದರೆ ತುರ್ತು ಚಿಕಿತ್ಸೆ
  • ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆ ಈ ಯೋಜನೆಗೆ ಹಬ್

ಹಠಾತ್ ಹೃದಯಾಘಾತ ತಡೆಯುವ ನಿಟ್ಟಿನಲ್ಲಿ ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಹೊಸ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

- Advertisement -

ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ‘ಅಪ್ಪು ಯೋಜನೆ’ ಜಾರಿಗೆ ತರುತ್ತಿದ್ದೇವೆ. ಹೃದಯಾಘಾತಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಈ ಯೋಜನೆಗೆ ಮುಂದಾಗಿದೆ ಎಂದು ಬೆಂಗಳೂರಿನಲ್ಲಿ ಮಾತನಾಡುತ್ತಾ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆಯನ್ನ ಈ ಯೋಜನೆಗೆ ಹಬ್ ಮಾಡಲಾಗಿದೆ. ಕೇವಲ ಆಸ್ಪತ್ರೆ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿಯೂ Automated External Defibrillators (AED )ಅಳವಡಿಕೆ ಮಾಡಲಾಗುತ್ತದೆ.‌ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ವಿಮಾನ ನಿಲ್ದಾಣ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಎಇಡಿ ಅಳವಡಿಕೆ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದರೆ, ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ನೀಡಲಾಗುವುದು. ಗೋಲ್ಡನ್ ಟೈಮ್ ನಲ್ಲಿ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಸೇರಿಸಬಹುದು. ರೋಗಿಯನ್ನ ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಹೃದಯಾಘಾತದ ಸಮಯದಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲಿಯೇ ಮರಣ ಹೊಂದುತ್ತಿದ್ದಾರೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೇ ಹೃದಯಾಘಾತ ತಪ್ಪಿಸಲು ಪೂರಕ ಔಷಧಗಳನ್ನು ಪೂರೈಸಲಾಗುವುದು. ಹೃದಯಾಘಾತದ ಸೂಚನೆ ಬಂದರೆ ತಕ್ಷಣ ಸಂಬಂಧಿಸಿದ ಔಷಧಿ ನೀಡಿ, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮೇಲ್ಮಟ್ಟದ ಆಸ್ಪತ್ರೆಗೆ ರವಾನಿಸಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದರು.

ಎರಡು ವಾರಗಳಲ್ಲಿ ಈ ಬಗ್ಗೆ ಟೆಂಡರ್ ಕರೆದು ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...