ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್

Date:

ಹಠಾತ್‌ ಎದೆ ನೋವು ಕಾಣಿಸಿಕೊಂಡ ಪರಿಣಾಮ ಖ್ಯಾತ ಸಂಗೀತ ನಿರ್ದೇಶಕ, ಆಸ್ಕರ್‌ ಪ್ರಶಸ್ತಿ ವಿಜೇತ ಎ ಆರ್‌ ರೆಹಮಾನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿದೆ. 58 ವರ್ಷದ ರೆಹಮಾನ್ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸುತ್ತಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

- Advertisement -

ಇತ್ತೀಚಿಗಷ್ಟೆ ವಿದೇಶದಿಂದ ವಾಪಸಾದ ನಂತರ ಕುತ್ತಿಗೆ ಭಾಗದಲ್ಲಿನ ನೋವು ಉಂಟಾದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ರೆಹಮಾನ್‌ ಅವರು ಬೇಗ ಚೇತರಿಸಿಕೊಳ್ಳಲೆಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದ ಮೂಲಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೆಲ ವಾರಗಳ ಹಿಂದೆ ರೆಹಮಾನ್‌ ಅವರ ಪತ್ನಿ ಸಾಯಿರಾ ಬಾನು ಕೂಡ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಲೈಂಗಿಕ ಕಾರ್ಯಕರ್ತೆಯ ನೋವು-ನಲಿವುಗಳ ಕಥೆ ‘ಅನೋರಾ’ಗೆ ಐದು ಆಸ್ಕರ್‌ ಪ್ರಶಸ್ತಿಗಳ ಗರಿ

ಸಾಯಿರಾ ಬಾನು ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ತುರ್ತು ಸಮಯದಲ್ಲಿಯೂ ಅವರು ಬೇಗನೆ ಚೇತರಿಸುಕೊಳ್ಳುವುದಕ್ಕೆ ಗಮನ ನೀಡುತ್ತಿದ್ದಾರೆ. ರೆಹಮಾನ್‌ ಅವರ ಆಪ್ತರು ಹಾಗೂ ಅಭಿಮಾನಿಗಳು ಸಾಯಿರಾ ಅವರು ಗುಣಮುಖರಾಗಲು ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಸಾಯಿರಾ ಕೃತಜ್ಞತೆ ಸಲ್ಲಿಸಿರುವುದಾಗಿ ಸಾಯಿರಾ ಅವರ ವಕೀಲರಾದ ವಂದನಾ ಶಿವ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು.

ಎ ಆರ್ ರೆಹಮಾನ್‌ ಅವರು ಸಾಯಿರಾ ಅವರನ್ನು 1995ರಲ್ಲಿ ವಿವಾಹವಾಗಿದ್ದು, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನಿದ್ದಾನೆ. ರೆಹಮಾನ್‌ ಅವರು ಹಲವು ಭಾಷೆಯ ನೂರಾರು ಚಿತ್ರಗಳಿಗೆ ಸಂಗೀತ ನಿರ್ದೇಶನ ನೀಡಿದ್ದಾರೆ. 2009 ರಲ್ಲಿ ಸ್ಲಂ ಡಾಗ್‌ ಮಿಲೇನಿಯರ್‌ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ 2 ಆಸ್ಕರ್ ಪ್ರಶಸ್ತಿ ಲಭಿಸಿತ್ತು.

ರೆಹಮಾನ್ ಅವರು ನಿರ್ಲಜೀಕರಣದ ಪ್ರಯುಕ್ತ ಅವರು ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ನೀಡಲಾಗಿದ್ದು, ಕೆಲವು ಪರೀಕ್ಷೆಗಳನ್ನು ನಡೆಸಲಾಗಿದೆ. ಅಭಿಮಾನಿಗಳ ಪ್ರಾರ್ಥನೆಯಿಂದ ಅವರು ಆರೋಗ್ಯವಾಗಿದ್ದಾರೆ ಎಂದು ಪುತ್ರ ಅಮೀನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. ಸದ್ಯ ರೆಹಮಾನ್‌ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...