‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

Date:

Advertisements

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್  ಅವರು ಇತ್ತೀಚೆಗೆ ಆರ್​ಸಿಬಿ ಅನ್​ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಬಳಿಕ ನಡೆದ ಪಂದ್ಯಗಳಲ್ಲಿ ಆರ್​ಸಿಬಿ ಸೋಲು ಕಾಣುತ್ತಿದೆ. ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳನ್ನು ಬೆಂಗಳೂರು ತಂಡ ಸೋತಿದೆ. ಇದಕ್ಕೆ ಕೆಲವರು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಹೊಣೆ ಮಾಡಿ, ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನು ಖಂಡಿಸಿರುವ ಅಪ್ಪು ಅಭಿಮಾನಿಗಳ ಸಂಘಟನೆಯಾದ ‘ಅಪ್ಪು ಹುಡುಗರು ಕರ್ನಾಟಕ’ ಕಡೆಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಕಳೆದ ಮಾರ್ಚ್ ತಿಂಗಳ 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ತಂಡದ ಜೆರ್ಸಿ ಉದ್ಘಾಟನಾ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಆಹ್ವಾನಿಸಲಾಗಿತ್ತು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡವು ಕೆಲ ಪಂದ್ಯಗಳಲ್ಲಿ ಸೋತ ಕಾರಣ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್​ನಲ್ಲಿ ‘ಗಜ ಪಡೆ’ ಎಂಬ ನಕಲಿ ಖಾತೆ ಸೃಷ್ಟಿಸಿ, “ಗಂಡನನ್ನು ಕಳೆದುಕೊಂಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆ ಕಾರ್ಯಕ್ರಮಕ್ಕೆ ಬಂದಿದ್ದೇ ಆರ್‌ಸಿಬಿ ತಂಡದ ಸೋಲಿಗೆ ಕಾರಣ ಎಂದು ಅಶ್ವಿನಿ ಅವರನ್ನು ಸೋಲಿನ ಹೊಣೆ ಮಾಡಿದ್ದಲ್ಲದೇ, ಅಶ್ವಿನಿ ಅವರನ್ನು ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

Advertisements

”ಇದಾದ ನಂತರ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದಾಗ ‘ಗಜ ಪಡೆ’ ಎಂಬ ನಕಲಿ ಖಾತೆಯ ಹೆಸರನ್ನು ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾನೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಸುದೀಪ್ ಅವರಿಗೆ ಅವಮಾನ ಮಾಡಿರುತ್ತಾನೆ. ಈ ಘಟನೆಯಿಂದ ಪುನೀತ್ ಅಭಿಮಾನಿಗಳಿಗೆ ತುಂಬಾ ನೋವುಂಟಾಗಿದೆ. ಹಾಗಾಗಿ, ನಕಲಿ ಖಾತೆಯನ್ನು ಸೃಷ್ಟಿಸಿ ಮಹಿಳೆಯನ್ನು ಅವಮಾನಗೈದರಿರುವವನನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ, ಬಂಧಿಸಿ ಅವನಿಗೆ ತಕ್ಕ ಶಿಕ್ಷೆ ನೀಡಬೇಕಾಗಿ ಕೋರುತ್ತಿದ್ದೇವೆ” ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರಿಗೆ ನೀಡಿರುವ ದೂರಿನಲ್ಲಿ ಆಗ್ರಹಿಸಲಾಗಿದೆ.

ಖಾತೆಯ ಹೆಸರು ಬದಲಾಯಿಸಿದ ದುಷ್ಕರ್ಮಿ

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಅವಹೇಳನಗೈದು, ಮೊದಲು ಟ್ವೀಟ್ ಮಾಡುವಾಗ Gajapade-ಗಜಪಡೆ (@GAJAPADE6) ಎಂದು ಇತ್ತು. ಈ ಟ್ವೀಟ್‌ನಲ್ಲಿ, “ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಗಂಡ ಸತ್ತ ಮುಂ..ಯರನ್ನು ಕರೀಬಾರದು. ಆರ್‌ಸಿಬಿ ಅನ್‌ಬಾಕ್ಸ್‌ ಇವೆಂಟ್‌ಗೆ ಈ ಮುಂ…ಯನ್ನು ಕರೆದಿದ್ದಕ್ಕೆ ಎಲ್ಲ ಮ್ಯಾಚ್‌ ಸೋಲ್ತಾ ಇದ್ದಾರೆ” ಎಂದು #Yuvarajkumar #PuneethRajkumar #Yuva #Dboss #DevilTheHero ಎಂಬ ಹ್ಯಾಷ್‌ಟ್ಯಾಗ್‌ ಹಾಕಿ ಪೋಸ್ಟ್‌ ಮಾಡಲಾಗಿತ್ತು.

ಈ ಟ್ವೀಟ್ ವೈರಲ್ ಆದ ಬಳಿಕ ಖಾತೆಯನ್ನು ಪ್ರೈವೆಟ್ ಮಾಡಿದ್ದೂ ಅಲ್ಲದೆ, ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ನಿಧನ

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ಅವರು ಆಗಸ್ಟ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

ಕೇರಳ | ಟ್ರಕ್‌ಗೆ ಕಾರು ಡಿಕ್ಕಿ; ಮಲಯಾಳಂ ನಟನಿಗೆ ಗಾಯ

ಮಲಯಾಳಂ ನಟ ಬಿಜು ಕುಟ್ಟನ್‌ ಅವರು ಇಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

Download Eedina App Android / iOS

X