ಜಾತಿ ನಿಂದನೆ: ಹಾಸ್ಯ ನಟ ‘ಹುಲಿ ಕಾರ್ತಿಕ್”​ ಮೇಲೆ ಎಫ್​ಐಆರ್ ದಾಖಲು

Date:

ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಮಾತನಾಡಿದ್ದಾರೆ. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು ಎಂಬ ಕಾರಣದಿಂದ ಹಾಸ್ಯ ನಟ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ.

- Advertisement -

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಭೋವಿ ಸಮುದಾಯಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಪ್ರಕರಣ ದಾಖಲಾಗಿದೆ. ಲೋಕೇಶ್ ಎಂಬುವವರು ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾರ್ತಿಕ್, ಯಾವುದೋ ರೋಡಲ್ಲಿ ಬಿದ್ದಿರುವ ವಡ್ಡನ ತರ ಇದ್ಯಾ . ಈ ಬೆಲ್ಟ್ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಸ್ಕ್ರಿಪ್ಟ್
ಕಾರಣ. ಸ್ಕ್ರಿಪ್ಟ್ ರೈಟರ್ ಸಂದೀಪ್ ಅವರಿಗೆ ಧನ್ಯವಾದ ಎಂದು ಹೇಳಿದ್ದರು. ಈ ಹೇಳಿಕೆಯೂ ಒಂದು ನಿರ್ದಿಷ್ಟ
ಸಮುದಾಯವನ್ನು ಗುರಿಯಾಗಿಸಿಕೊಂಡು ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದು , ಸ್ಕ್ರಿಪ್ಟ್
ರೈಟರ್, ಕಾರ್ಯಕ್ರಮದ ನಿರ್ದೇಶಕ ಹಾಗೂನಿರ್ಮಾಪಕರ ವಿರುದ್ದವೂ ಜಾತಿ ನಿಂದನೆ ಆರೋಪದಡಿ ದೂರು
ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು...

ಮೈಸೂರು ಯುವ ದಸರಾ: ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಿದ್ಧತೆಗಳು ಬಿರುಸುಗೊಂಡಿದ್ದು, ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ...

ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್

ಸ್ಯಾಂಡಲ್‌ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ...