ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

Date:

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿನ ‘ಸಣ್ಣ ಟೈಪಿಂಗ್ ತಪ್ಪು’ (Typo error) ಮುಂಬೈ ಸೈಬರ್ ಪೊಲೀಸರನ್ನು ಆತಂಕಕ್ಕೀಡುತ್ತಿದೆ. ಅವರ ಪೋಸ್ಟ್‌ ನೋಡಿದ ಪೊಲೀಸರು ಮಧ್ಯರಾತ್ರಿ ಇಡೀ ನಗರದಲ್ಲಿ ಹುಡುಕಾಟ ನಡೆಸಿದ್ದಾರೆ.

- Advertisement -

ನಟ ವಿಕಾಸ್ ಸಮುದ್ರೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮರಾಠಿಯಲ್ಲಿ ‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪೋಸ್ಟ್ ಹಾಕಿದ್ದರು. ಇದನ್ನು ಕಂಡ ತಕ್ಷಣ ಸಾರ್ವಜನಿಕರು ಮತ್ತು ಅಭಿಮಾನಿಗಳು ಆತಂಕಗೊಂಡಿದ್ದು, ಮುಂಬೈ ಸೈಬರ್ ಪೊಲೀಸ್ ವಿಭಾಗಕ್ಕೆ ತಕ್ಷಣ ಮಾಹಿತಿ ರವಾನಿಸಿದ್ದಾರೆ. ವಿಷಯ ಗಂಭೀರವಾಗಿದ್ದರಿಂದ ಮುಂಬೈ ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ, ಇಡೀ ನಗರವನ್ನು ಜಾಲಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ರಾತ್ರಿ 11:03ಕ್ಕೆ ಸೈಬರ್ ಲ್ಯಾಬ್, ಐದು ಮಂದಿ ಸೈಬರ್ ಅಧಿಕಾರಿಗಳು ಹಾಗೂ ಕಂಟ್ರೋಲ್ ರೂಂ ಸಿಬ್ಬಂದಿ ನಟನ ಇರುವಿಕೆಯನ್ನು ಪತ್ತೆಹಚ್ಚಲು ಕಾರ್ಯಚರಣೆ ನಡೆಸಿದ್ದಾರೆ. ಮೊಬೈಲ್ ಲೊಕೇಶನ್ ಮತ್ತು ತಾಂತ್ರಿಕ ಬೆಂಬಲದೊಂದಿಗೆ ಪೊಲೀಸರು, ಅಂತಿಮವಾಗಿ ರಾತ್ರಿ 12:15ರ ವೇಳೆಗೆ ವಿಕಾಸ್ ಸಮುದ್ರೆ ಅವರನ್ನು ಸುರಕ್ಷಿತವಾಗಿ ಸಂಪರ್ಕಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಳಿಕ, ಪೋಸ್ಟ್ ಕುರಿತು ಸ್ಪಷ್ಟನೆ ನೀಡಿದ ನಟ ವಿಕಾಸ್, ತಮ್ಮ ಪೋಸ್ಟ್ ಹಿಂದೆ ಯಾವುದೇ ಆತ್ಮಹತ್ಯೆಯ ಉದ್ದೇಶವಿರಲಿಲ್ಲ, ಅದು ಕೇವಲ ಟೈಪಿಂಗ್ ಎಡವಟ್ಟು ಎಂದು ತಿಳಿಸಿದ್ದಾರೆ.

ತಮ್ಮ ಮುಂದಿನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಮರಾಠಿಯಲ್ಲಿ ಬರೆದುಕೊಂಡ ಅವರು, ‘ನಾನು ಡ್ರಾಮಾ ಮಾಡುತ್ತಿದ್ದೇನೆ’ ಎಂದು ಟೈಪ್ ಮಾಡಲು ಹೋಗಿ, ಆಟೋಕರೆಕ್ಟ್/ಟೈಪಿಂಗ್ ತಪ್ಪಿನಿಂದ ‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪೋಸ್ಟ್ ಆಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ನಾನು ಸಂಪೂರ್ಣ ಸುರಕ್ಷಿತವಾಗಿದ್ದೇನೆ. ನಿಮ್ಮ ಪ್ರೀತಿಗೆ ಧನ್ಯವಾದಗಳು ಎಂದು ಸ್ಪಷ್ಟಪಡಿಸಿದರು.

ತಾವು ಅಭಿನಯಿಸುತ್ತಿರುವ ನೂತನ ನಾಟಕದ ಪ್ರಚಾರಕ್ಕಾಗಿ ಈ ಪೋಸ್ಟ್ ಹಾಕಲು ಪ್ರಯತ್ನಿಸುತ್ತಿದ್ದಾಗಿ ಅವರು ವಿವರಿಸಿದ್ದಾರೆ.

ಮರಾಠಿ ರಂಗಭೂಮಿ ಮತ್ತು ಸಿನಿಮಾದಲ್ಲಿ ಹಾಸ್ಯ ನಟನೆಯ ಮೂಲಕ ಹೆಸರು ಮಾಡಿರುವ ವಿಕಾಸ್ ಸಮುದ್ರೆ, ‘ನವ್ರಾ ಮಾಝಾ ನವಸಾಚಾ’ (Navra Maza Navsacha) ಎಂಬ ಹಿಟ್ ಸಿನಿಮಾ ಮೂಲಕ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...