ತೆರೆಕಂಡ 6 ತಿಂಗಳ ಬಳಿಕ ಒಟಿಟಿಯತ್ತ ಮುಖ ಮಾಡಿದ ʼಅವತಾರ್‌-2ʼ

Date:

ಜಗತ್ತಿನಾದ್ಯಂತ 12 ಸಾವಿರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಅವತಾರ್‌-2

18 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ಕಲೆ ಹಾಕಿದ್ದ ಚಿತ್ರ

ಹಾಲಿವುಡ್‌ನ ಖ್ಯಾತ ನಿರ್ದೇಶಕ ಜೇಮ್ಸ್‌ ಕ್ಯಾಮರೂನ್‌ ನಿರ್ದೇಶನದ ʼಅವತಾರ್‌-2ʼ ಸಿನಿಮಾ ಜಗತ್ತಿನಾದ್ಯಂತ ಯಶಸ್ವಿ ಪ್ರದರ್ಶನ ಕಂಡಿತ್ತು. ಗಲ್ಲಾ ಪೆಟ್ಟಿಗೆಯಲ್ಲೂ ದಾಖಲೆಯ ಗಳಿಕೆ ಮಾಡಿದ್ದ ಈ ಚಿತ್ರ ತೆರೆಕಂಡ ಆರು ತಿಂಗಳ ಬಳಿಕ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಅವತಾರ್‌-2’ ಚಿತ್ರದ ಡಿಜಿಟಲ್‌ ಹಕ್ಕನ್ನು ‘ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌’, ‘ಅಮೆಜಾನ್‌ ಪ್ರೈಂ’, ʼಆ್ಯಪಲ್‌ ಟಿವಿʼ ಸೇರಿದಂತೆ ಹಲವು ಜನಪ್ರಿಯ ಒಟಿಟಿ ಸಂಸ್ಥೆಗಳು ಬಹುಕೋಟಿ ಮೊತ್ತಕ್ಕೆ ಖರೀದಿಸಿವೆ. ಜೂನ್‌ 7ರಂದು ಚಿತ್ರ ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗಲಿದೆ.

ಒಟಿಟಿಯಲ್ಲಿ ʼಅವತಾರ್‌-2ʼ ವೀಕ್ಷಣೆಗೆ ಹೆಚ್ಚುವರಿ ಶುಲ್ಕ ತೆರಬೇಕಾಗುತ್ತದೆ ಎಂಬ ಸುದ್ದಿ ಕೂಡ ಈ ಹಿಂದೆ ಎಲ್ಲೆಡೆ ಹರಿದಾಡಿತ್ತು. ಈ ಸ್ಪಷ್ಟನೆ ನೀಡಿರುವ ಚಿತ್ರತಂಡ ಒಟಿಟಿ ವೇದಿಕೆಗಳಲ್ಲಿ ಯಾವುದೇ ಹೆಚ್ಚುವರಿ ಶುಲ್ಕ ತೆರುವ ಅಗತ್ಯವಿಲ್ಲ ಎಂದು ಖಚಿತಪಡಿಸಿದೆ. ಇಂಗ್ಲಿಷ್‌, ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.

ಈ ಸುದ್ದಿ ಓದಿದ್ದೀರಾ? ನಷ್ಟದ ಬೆನ್ನಲ್ಲೇ 50 ಮಲ್ಟಿಪ್ಲೆಕ್ಸ್‌ ಸ್ಕ್ರೀನ್‌‌ ಮುಚ್ಚಲು ಸಜ್ಜಾದ ‘ಪಿವಿಆರ್ ಐನಾಕ್ಸ್’

ಕಳೆದ ಡಿಸೆಂಬರ್‌ 16ರಂದು ಜಗತ್ತಿನಾದ್ಯಂತ 12 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ʼಅವತಾರ್‌-2ʼ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಬರೋಬ್ಬರಿ 18 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು ಕಲೆ ಹಾಕುವ ಮೂಲಕ ದಾಖಲೆ ಬರೆದಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...