ನಟ ಶಿವರಾಜ್‌ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರಿ: ಬಿಜೆಪಿಯಿಂದ ಆಯೋಗಕ್ಕೆ ದೂರು

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಒತ್ತಾಯಿಸಿದೆ.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ. ಜನರ ಬಳಿ ಹೋಗಿ ಬಿರುಸಿನಿಂದ ಮತಬೇಟೆ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾವು ಅವರ ವಿರುದ್ಧ ದೂರು ನೀಡಿದೆ.

ಮನವಿಯಲ್ಲಿ, ನಟ ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿಯ ಪರ ಚುನಾವಣಾ ಪ್ರಚಾರ ಮಾಡುತ್ತಿರುವುದರಿಂದ ಅವರು ನಟಿಸಿರುವ ಸಿನಿಮಾ, ಜಾಹೀರಾತುಗಳನ್ನು ಸದ್ಯದ ಮಟ್ಟಿಗೆ ನಿಷೇಧ ಮಾಡಬೇಕು. ಯಾವುದನ್ನೂ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ‘ಬಾಂಡ್’ ಬಗ್ಗೆ ತುಟಿಬಿಚ್ಚದ ಅಣ್ಣಾ ಹಝಾರೆ, ಕೇಜ್ರಿವಾಲ್ ಬಂಧನದ ಬೆನ್ನಲ್ಲೇ ಪ್ರತ್ಯಕ್ಷ!

ಪತ್ನಿ ಗೀತಾಗೆ ಬೆಂಬಲ ನೀಡಿರುವ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಕಾಂಗ್ರೆಸ್ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜ್‌ ಕುಮಾರ್ ಅವರ ಜನಪ್ರಿಯತೆ ಹಾಗೂ ಚಲನಚಿತ್ರಗಳಿಂದ ಮತದಾರರ ಮೇಲೆ ಪ್ರಭಾವ ಬೀರಲಿದೆ. ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಕುಮಾರ್ ನಟನೆಯ ಚಿತ್ರ ಪ್ರಸಾರಕ್ಕೆ ತಡೆ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಹೀಗಾಗಿ ಎಲ್ಲದಕ್ಕೂ ನಿರ್ಬಂಧ ವಿಧಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಮುಸ್ಲಿಮರ ಮೀಸಲಾತಿ ಬಗ್ಗೆ ಸತ್ಯ ಮರೆಮಾಚಿ ಬಿಜೆಪಿಯಿಂದ ಸುಳ್ಳು ಜಾಹೀರಾತು: ಸಿಎಂ ಸಿದ್ದರಾಮಯ್ಯ

"ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಮುಸ್ಲಿಮರ ಸೇರ್ಪಡೆಯು ಮಂಡಲ್ ವರದಿಯನ್ನು ಆಧರಿಸಿ...

Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

ಲೋಕಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ...

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...