ಬೆಂಗಳೂರು | ಭಾಷಾ ಸಾಮರಸ್ಯ ಕದಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್

Date:

“ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಸೋನು ನಿಗಮ್ ಅವರು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿಯಾಗುತ್ತಿದ್ದಂತೆಯೇ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಧರ್ಮರಾಜ್ ಎ. ಅವರು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇ 3ರಂದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನೂತನ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿರುವ ಪೊಲೀಸರು, ವಿಭಿನ್ನ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು. ಭಾಷೆ, ಜಾತಿ, ಸಮುದಾಯದಂತಹ ಕಾರಣಗಳಿಂದ ಗುಂಪುಗಳಲ್ಲಿ ಸೇಡಿನ ಭಾವನೆ ಉಂಟುಮಾಡುವುದು, ಧಾರ್ಮಿಕ ಅಥವಾ ಭಾಷಿಕ ಭಾವನೆಗಳನ್ನು ಕೆರಳಿಸುವುದು ಸೇರಿದಂತೆ ಈ ಮೂರು ಸೆಕ್ಷನ್‌ ಅಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಫಾಝಿಲ್ ಸಹೋದರ ಕೂಡ ಭಾಗಿ: ಪೊಲೀಸ್ ಕಮಿಷನರ್ ಅಗರ್ವಾಲ್

ಸೋನು ನಿಗಮ್ ವಿರುದ್ಧ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 351(2), 352(I) & 353 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದು ಗಾಯಕ ಸೋನು ನಿಗಮ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.

ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದನು. ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, “ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆ ಪೈಕಿ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ನೀವೆಲ್ಲ ನನ್ನನ್ನು ನಿಮ್ಮ ಕುಟುಂಬದವರಂತೆ ನೋಡಿಕೊಂಡಿದ್ದೀರಿ. ಪ್ರತಿ ಬಾರಿ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆ ಹುಡುಗನ ವಯಸ್ಸಿಗಿಂತ ಮೊದಲಿನಿಂದಲೂ ನಾನು ಕನ್ನಡ ಹಾಡು ಹಾಡುತ್ತಿದ್ದೇನೆ. ಆದರೆ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಆ ಹುಡುಗ ಹೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು” ಎಂದು ಹೇಳಿಕೆ ನೀಡಿದ್ದರು. ಇದು ಕನ್ನಡಪರ ಸಂಘಟನೆ ಹಾಗೂ ಕನ್ನಡಿಗರ ಕೆಂಗಣ್ಣಿಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...