ಇಂಗ್ಲೆಂಡ್ ಮೂಲದ ಖ್ಯಾತ ಗಾಯಕ ಎಡ್ ಶೀರನ್ ಅನುಮತಿ ಇಲ್ಲದೇ ಬೀದಿ ಬದಿಯಲ್ಲಿ ಕಾರ್ಯಕ್ರಮ ನಡೆಸುತ್ತಿದ್ದು, ಅವರ ಗಾಯನ ಪ್ರದರ್ಶನವನ್ನು ಪೊಲೀಸರು ತಡೆಯೊಡ್ಡಿದ್ದಾರೆ.
ಎಡ್ ಶೀರನ್ ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ‘ಶೇಫ್ ಆಫ್ ಯು’ ಹಾಡನ್ನು ಉತ್ಸಾಹದಿಂದ ಹಾಡುತ್ತಾ ಪ್ರದರ್ಶನ ನೀಡುತ್ತಿದ್ದರು. ಅನುಮತಿ ಪಡೆಯದೇ ಹಾಡಿದಕ್ಕೆ ಕಬ್ಬನ್ ಪಾರ್ಕ್ ಪೊಲೀಸರು ಗಾಯನ ಪ್ರದರ್ಶನಕ್ಕೆ ಬ್ರೇಕ್ ಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಮೈಕ್ ಫ್ಲಗ್ ಕಿತ್ತು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?
ಎಡ್ ಶೀರನ್ ಗಾಯನಕ್ಕೆ ಪೊಲೀಸರು ಬ್ರೇಕ್ ಹಾಕಿದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ಅವರು ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿರಲಿಲ್ಲ. ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದಾರಾ ಅಥವಾ ಇಲ್ಲವೋ ಎಂಬುದರ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ. ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪ್ರದರ್ಶನ ನೀಡುವ ಮೊದಲು ಅನುಮತಿ ಪಡೆಯಬೇಕಾಗಿದೆ. ಅವರು ಪ್ರಚಾರಕ್ಕಾಗಿ ಇದ್ದಕ್ಕಿದ್ದಂತೆ ಈ ರೀತಿ ಮಾಡಿದ್ದಾರೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಬಹುದು ಎಂದು ಹೇಳಿದ್ದಾರೆ.
ಶೀರನ್ ಫೆ.5 ರಂದು ಚೆನ್ನೈನ ವೈಎಂಸಿಎ ಮೈದಾನದಲ್ಲೂ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರು. ಶೀರಿನ್ ಜೊತೆ ಭಾರತದ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಕೂಡ ಸಂಗೀತ ಸಂಜೆಯಲ್ಲಿ ಭಾಗಿಯಾಗಿದ್ದರು.
