ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ 11 ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿ, ಇದೀಗ 12ನೇ ಆವೃತ್ತಿಗೆ ಕಾಲಿಡುವ ಸನಿಹದಲ್ಲಿದೆ. ಈ ಸಂದರ್ಭದಲ್ಲಿ ‘ಕಲರ್ಸ್ ಕನ್ನಡ’ ವಾಹಿನಿ ನಿರೂಪಕರ ಬಗ್ಗೆ ಅಚ್ಚರಿಯ ನಿರ್ಧಾರ ಕೈಗೊಂಡಿದೆ.
ನಟ ಕಿಚ್ಚ ಸುದೀಪ್ ಅವರೇ 12ನೇ ಆವೃತ್ತಿಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ಸಿಕ್ಕಿದೆ. ಬಿಗ್ಬಾಸ್ ಸಂಯೋಜಕರು ಹಾಗೂ ಕಲರ್ಸ್ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ.
11ನೇ ಆವೃತ್ತಿ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ವು, ಈ ಬಗ್ಗೆ ಕಿಚ್ಚ ಸುದೀಪ್ ಕೂಡ ಕಾದು ನೋಡಿ ಎನ್ನುವ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ಮತ್ತೆ 12ನೇ ಆವೃತ್ತಿ ನಡೆಸಿಕೊಡುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ
ಕಿಚ್ಚ ಸುದೀಪ್ ಅವರನ್ನು ನೋಡುವ ಸಲುವಾಗಿಯೇ ವಾರಾಂತ್ಯದಲ್ಲಿ ಅಭಿಮಾನಿಗಳು ಟಿವಿ ಎದುರು ಕೂರುತ್ತಾರೆ. ಸುದೀಪ್ ಇಲ್ಲದೇ ಇದ್ದರೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಹೆಚ್ಚು ಜನಪ್ರಿಯ ಪಡೆಯುವುದು ಸಾಧ್ಯವಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹರಿದಾಡಿದ್ದವು.
ಆದರೆ ಈಗ ಸುದೀಪ್ ಅವರೇ ನಿರೂಪಣೆ ಮಾಡಲು ಒಪ್ಪಿಕೊಂಡಿರುವುದು ವೀಕ್ಷಕರಿಗೆ ಖುಷಿ ತಂದಿದೆ ಎನ್ನಲಾಗಿದೆ. ಸುದೀಪ್ ಇಲ್ಲಿಯವರೆಗೂ ಸತತವಾಗಿ 11 ಆವೃತ್ತಿಗಳನ್ನು ನಡೆಸಿಕೊಟ್ಟಿದ್ದಾರೆ. ಈಗ 12ನೇ ಆವೃತ್ತಿಗೂ ಅವರೇ ನಿರೂಪಣೆ ಮಾಡಲಿದ್ದಾರೆ.