ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರ ಬಂದಿದ್ದ ಬಿಗ್‌ಬಾಸ್ ಖ್ಯಾತಿಯ ರಜತ್ ಕಿಶನ್ ಅವರನ್ನು ಇದೀಗ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜಾಮೀನು ಪಡೆದ ಬಳಿಕ ನಡೆದ ವಿಚಾರಣೆ ವೇಳೆ ರಜತ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಈ ಬೆನ್ನಲ್ಲೇ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ, ರಜತ್ ಮತ್ತು ವಿಜಯ್ ಗೌಡ ಇಬ್ಬರೂ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಅದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದಕ್ಕಾಗಿ ಅವರಿಬ್ಬರ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇಬ್ಬರನ್ನೂ ಪೊಲೀಸರು ಬಂಧಿಸಿದ್ದರು. ಬಳಿಕ, ಇಬ್ಬರಿಗೂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು. ವಿಚಾರಣೆಗಳು ನಡೆಯಾಗ ನ್ಯಾಯಾಲಯದಲ್ಲಿ ಹಾಜರಾಗಬೇಕೆಂದು ಸೂಚನೆ ನೀಡಿತ್ತು.
ಜಾಮೀನು ಪಡೆದು ಹೊರಬಂದ ಬಳಿಕ ಪ್ರಕರಣದ ವಿಚಾರಣೆ ವೇಳೆ ರಜತ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ, ನ್ಯಾಯಾಲಯವು ರಜತ್ ಅವರನ್ನು ಬಂಧಿಸಿ ಕರೆತರುವಂತೆ ಪೊಲೀಸರಿಗೆ ಸೂಚಿಸಿತ್ತು. ರಜತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.
ಇದೀಗ, ರಜತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಜಾಮೀನು ಪಡೆದು ಹೊರಬಂದ ಬಳಿಕ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದ ರಜತ್, “ನಾವು ರೀಲ್ಸ್‌ಗೆ ಬಳಸಿದ್ದ ಮಚ್ಚು ಅಸಲಿ ಅಲ್ಲ. ಅದು ಫೈಬರ್ ಮಚ್ಚು. ಆ ಮಚ್ಚು ಕಾಣೆಯಾಗಿದೆ. ಪೊಲೀಸರ ದಾರಿ ತಪ್ಪಿಸುವ, ಸುಳ್ಳು ಹೇಳುವ ಕೆಲಸವನ್ನು ನಾವು ಮಾಡಿಲ್ಲ” ಎಂದಿದ್ದರು.