ಬಿಗ್‌ಬಾಸ್‌ ಖ್ಯಾತಿಯ ರಜತ್ ಮತ್ತೆ ಅರೆಸ್ಟ್‌

Date:

ಮಚ್ಚು ಹಿಡಿದು ರೀಲ್ಸ್‌ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರ ಬಂದಿದ್ದ ಬಿಗ್‌ಬಾಸ್‌ ಖ್ಯಾತಿಯ ರಜತ್‌ ಕಿಶನ್ ಅವರನ್ನು ಇದೀಗ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜಾಮೀನು ಪಡೆದ ಬಳಿಕ ನಡೆದ ವಿಚಾರಣೆ ವೇಳೆ ರಜತ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿಯಾಗಿತ್ತು. ಈ ಬೆನ್ನಲ್ಲೇ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಇತ್ತೀಚೆಗೆ, ರಜತ್ ಮತ್ತು ವಿಜಯ್‌ ಗೌಡ ಇಬ್ಬರೂ ಮಚ್ಚು ಹಿಡಿದು ರೀಲ್ಸ್‌ ಮಾಡಿದ್ದರು. ಅದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಾರಕಾಸ್ತ್ರ ಹಿಡಿದು ರೀಲ್ಸ್‌ ಮಾಡಿದ್ದಕ್ಕಾಗಿ ಅವರಿಬ್ಬರ ವಿರುದ್ಧ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇಬ್ಬರನ್ನೂ ಪೊಲೀಸರು ಬಂಧಿಸಿದ್ದರು. ಬಳಿಕ, ಇಬ್ಬರಿಗೂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು. ವಿಚಾರಣೆಗಳು ನಡೆಯಾಗ ನ್ಯಾಯಾಲಯದಲ್ಲಿ ಹಾಜರಾಗಬೇಕೆಂದು ಸೂಚನೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಾಮೀನು ಪಡೆದು ಹೊರಬಂದ ಬಳಿಕ ಪ್ರಕರಣದ ವಿಚಾರಣೆ ವೇಳೆ ರಜತ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ, ನ್ಯಾಯಾಲಯವು ರಜತ್ ಅವರನ್ನು ಬಂಧಿಸಿ ಕರೆತರುವಂತೆ ಪೊಲೀಸರಿಗೆ ಸೂಚಿಸಿತ್ತು. ರಜತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

ಇದೀಗ, ರಜತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಜಾಮೀನು ಪಡೆದು ಹೊರಬಂದ ಬಳಿಕ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದ ರಜತ್, “ನಾವು ರೀಲ್ಸ್‌ಗೆ ಬಳಸಿದ್ದ ಮಚ್ಚು ಅಸಲಿ ಅಲ್ಲ. ಅದು ಫೈಬರ್ ಮಚ್ಚು. ಆ ಮಚ್ಚು ಕಾಣೆಯಾಗಿದೆ. ಪೊಲೀಸರ ದಾರಿ ತಪ್ಪಿಸುವ, ಸುಳ್ಳು ಹೇಳುವ ಕೆಲಸವನ್ನು ನಾವು ಮಾಡಿಲ್ಲ” ಎಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...