ಟ್ರಾಫಿಕ್‌ನಿಂದ ಪಾರಾಗಲು ಅಪರಿಚಿತನ ಬೈಕ್‌ ಏರಿದ ಅಮಿತಾಬ್‌ ಬಚ್ಚನ್‌

Date:

ಮುಂಬೈನ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್‌ನ ಹಿರಿಯ ನಟ ಅಮಿತಾಬ್‌ ಬಚ್ಚನ್‌ ನಿಗದಿತ ಸಮಯಕ್ಕೆ ಶೂಟಿಂಗ್‌ ಸ್ಥಳಕ್ಕೆ ತಲುಪುವ ಸಲುವಾಗಿ ಅಪರಿಚಿತ ವ್ಯಕ್ತಿಯೊಬ್ಬರಿಂದ ಲಿಫ್ಟ್‌ ಪಡೆದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

- Advertisement -

ಅಮಿತಾಬ್‌ ಬಚ್ಚನ್‌ ಸದ್ಯ ಹೆಸರಿಡದ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ನಡೆಯುತ್ತಿದೆ. ಭಾನುವಾರ ಬೆಳಗ್ಗೆ ತಮ್ಮ ಮನೆಯಿಂದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ತೆರಳುತ್ತಿದ್ದ ಅಮಿತಾಬ್‌ ಮಾರ್ಗ ಮಧ್ಯೆ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ತಡವಾಗುತ್ತಿರುವುದನ್ನು ಮನಗಂಡು ಬೈಕ್‌ನಲ್ಲಿ ಅದೇ ಮಾರ್ಗವಾಗಿ ಸಾಗುತ್ತಿದ್ದ ಅಪರಿಚಿತ ವ್ಯಕ್ತಿಯಿಂದ ಲಿಫ್ಟ್‌ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಾವು ಅಪರಿಚಿತರ ಬೈಕ್‌ನಲ್ಲಿ ಸಾಗುತ್ತಿರುವ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಬಚ್ಚನ್‌, “ನೀವು ಯಾರೆಂದು ನನಗೆ ಗೊತ್ತಿಲ್ಲ. ಆದರೆ, ನೀವು ಟ್ರಾಫಿಕ್‌ ಸಮಸ್ಯೆ ನಡುವೆಯೇ ವೇಗವಾಗಿ ನಾನು ಸೇರಬೇಕಾದ ಸ್ಥಳಕ್ಕೆ ಸರಿಯಾದ ಸಮಯಕ್ಕೆ ತಲುಪಿಸಿದಿರಿ. ಲಿಫ್ಟ್‌ ನೀಡಿದ್ದಕ್ಕೆ ಧನ್ಯವಾದ” ಎಂದಿದ್ದಾರೆ.

ಬಚ್ಚನ್‌ ಅಪರಿಚಿತ ವ್ಯಕ್ತಿಯ ಬೈಕ್‌ನಲ್ಲಿ ತುರ್ತು ಸವಾರಿ ಮಾಡಿದ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈಲರ್‌ ಆಗಿದ್ದು, ಇಳಿಯ ವಯಸ್ಸಿನಲ್ಲೂ ಅಮಿತಾಬ್‌ ಬಚ್ಚನ್‌ ಅವರು ತಮ್ಮ ಕೆಲಸದ ಮೇಲಿಟ್ಟಿರುವ ಶ್ರದ್ಧೆ ಮತ್ತು ಅವರಿಗಿರುವ ಸಮಯ ಪ್ರಜ್ಞೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟನಿಗೆ ಲಿಫ್ಟ್‌ ನೀಡಿದ ವ್ಯಕ್ತಿಯನ್ನೂ ಕೂಡ ಕೊಂಡಾಡುತ್ತಿದ್ದಾರೆ. ಈ ಬೈಕ್‌ ಸವಾರಿ ವೇಳೆ ಬೈಕ್‌ ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಲಿಫ್ಟ್‌ ಪಡೆದುಕೊಂಡಿರುವ ಅಮಿತಾಬ್‌ ಬಚ್ಚನ್‌ ಇಬ್ಬರೂ ಹೆಲ್‌ಮೆಟ್‌ ಧರಿಸಿಲ್ಲ. ಹೀಗಾಗಿ ಹೆಲ್‌ಮೆಟ್‌ ಧರಿಸಿ, ಸುರಕ್ಷತೆಯ ಬಗ್ಗೆ ಗಮನ ಹರಿಸುವಂತೆಯೂ ಅಭಿಮಾನಿಗಳು ಕಾಳಜಿಯಿಂದ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...