ಘೋಸ್ಟ್‌ ಚಿತ್ರತಂಡ ಸೇರಿಕೊಂಡ ಅನುಪಮ್‌ ಖೇರ್‌

Date:

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಅಭಿನಯದ ಘೋಸ್ಟ್‌ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ವೇದ ಸಿನಿಮಾದ ಯಶಸ್ಸಿನ ಬಳಿಕ ಘೋಸ್ಟ್‌ ಚಿತ್ರದ ಮೂರನೇ ಹಂತದ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದು, ಬಾಲಿವುಡ್‌ನ ಖ್ಯಾತ ನಟ ಅನುಪಮ್‌ ಖೇರ್‌ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ.

- Advertisement -

ʼಓಲ್ಡ್‌ಮಾಂಕ್‌ʼ ಖ್ಯಾತಿಯ ನಿರ್ದೇಶಕ ಶ್ರೀನಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಆ್ಯಕ್ಷನ್ʼ, ʼಥ್ರಿಲ್ಲರ್‌ʼ ಕಥಾಹಂದರವುಳ್ಳ ಘೋಸ್ಟ್‌ ಚಿತ್ರದ ಅನುಪಮ್‌ ಖೇರ್‌ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಚಿತ್ರದಲ್ಲಿ ನಟಿಸುತ್ತಿರುವ ವಿಚಾರವನ್ನು ನಿರ್ದೇಶಕರು ಈ ಹಿಂದೆಯೇ ಬಹಿರಂಗಪಡಿಸಿದ್ದರು. ಮೂರನೇ ಹಂತದ ಶೂಟಿಂಗ್‌ ಶುರುವಾದ ಬೆನ್ನಲ್ಲೇ ಅನುಪಮ್‌ ಖೇರ್‌ ಬೆಂಗಳೂರಿಗೆ ಬಂದಿಳಿದಿದ್ದು, ಹಿರಿಯ ನಟನನ್ನು ಚಿತ್ರತಂಡ ಆತ್ಮೀಯವಾಗಿ ಬರಮಾಡಿಕೊಂಡಿದೆ. ಶ್ರೀನಿ, ಅನುಪಮ್‌ ಖೇರ್‌ ಅವರಿಗೆ ಪಾತ್ರದ ಬಗ್ಗೆ ವಿವರಿಸುತ್ತಿರುವ ಫೋಟೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇವಲ ಅನುಪಮ್‌ ಖೇರ್‌ ಮಾತ್ರವಲ್ಲ ಮಲಯಾಳಂನ ಖ್ಯಾತ ನಟ ಜಯರಾಂ ಈ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಅವರ ಪಾತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬಹುಭಾಷಾ ನಟ ಪ್ರಶಾಂತ್‌ ನಾರಾಯಣನ್‌ ಕೂಡ ಚಿತ್ರದಲ್ಲಿದ್ದಾರೆ. ಉಳಿದಂತೆ ಅಚ್ಯುತ್‌ ಕುಮಾರ್‌, ದತ್ತಣ್ಣ, ಅವಿನಾಶ್‌ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಮನ ಸೆಳೆಯುತ್ತಿದೆ ʼಹೊಯ್ಸಳʼ ಚಿತ್ರದ ಜನಪದ ಹಾಡು

ʼಸಂದೇಶ್‌ ಪ್ರೊಡಕ್ಷನ್ಸ್‌ʼ ಬ್ಯಾನರ್‌ನಡಿಯಲ್ಲಿ ಸಿದ್ಧಗೊಳ್ಳುತ್ತಿರುವ ʼಘೋಸ್ಟ್‌ʼ ಚಿತ್ರಕ್ಕಾಗಿ ಬೆಂಗಳೂರಿನ ಮಿನರ್ವ ಮಿಲ್‌ ಮತ್ತು ಮೈಸೂರಿನ ಹೊರವಲಯದಲ್ಲಿ ಅಂದಾಜು 6 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಬೃಹತ್‌ ಸೆಟ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...