ಟಾಲಿವುಡ್‌ನತ್ತ ಮುಖ ಮಾಡಿದ ನವಾಜುದ್ದೀನ್‌ ಸಿದ್ದಿಕಿ

ನವಾಜುದ್ದೀನ್‌ ಸಿದ್ದಿಕಿ

ʼಸೈಂಧವ್‌ʼ ಚಿತ್ರದಲ್ಲಿ ಖಳನ ಪಾತ್ರದಲ್ಲಿ ಮಿಂಚಲಿರುವ ಸಿದ್ದಿಕಿ

ತೆಲುಗಿನ ಖ್ಯಾತನಟ ವಿಕ್ಟರಿ ವೆಂಕಟೇಶ್‌ ನಟನೆಯ ಸಿನಿಮಾ

ಬಾಲಿವುಡ್‌ನ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಸದ್ಯ ಟಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ ಸಿದ್ದಿಕಿ ತೆಲುಗಿನ ಖ್ಯಾತ ನಟ ವಿಕ್ಟರಿ ವೆಂಕಟೇಶ್‌ ಅಭಿನಯದ ʼಸೈಂಧವ್ʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶೈಲೇಶ್ ಕೋಲನು ನಿರ್ದೇಶನದ ʼಸೈಂಧವ್ʼ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ, ವಿಕಾಸ್‌ ಮಲಿಕ್‌ ಎಂಬ ಖಳನ ಪಾತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಸಿದ್ದಿಕಿ, ಶುಕ್ರವಾರ 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತ ಫಸ್ಟ್‌ಲುಕ್‌ ಪೋಸ್ಟರ್‌ ಹಂಚಿಕೊಂಡಿರುವ ಚಿತ್ರತಂಡ ನಟನಿಗೆ ಶುಭಕೋರಿದೆ.

ಆ್ಯಕ್ಷನ್, ಥ್ರಿಲ್ಲರ್‌ ಕಥಾಹಂದರವುಳ್ಳ ʼಸೈಂಧವ್‌ʼ ಚಿತ್ರದಲ್ಲಿ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರುಹಾನಿ ಶರ್ಮಾ, ಆಂಡ್ರಿಯಾ ಜೆರೆಮಿಯಾ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ತೆಲುಗು, ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಚಿತ್ರಕ್ಕೆ ಸಂತೋಷ್ ನಾರಾಯಣನ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಿಹಾರಿಕಾ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ವೆಂಕಟ್ ಬೋಯನಪಲ್ಲಿ ʼಸೈಂಧವ್‌ʼ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ವರ್ಷಾಂತ್ಯಕ್ಕೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here