ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

Date:

ಏಪ್ರಿಲ್‌ 30ರಂದು ಸಲ್ಮಾನ್‌ ಖಾನ್‌ ಕೊಲ್ಲುವುದಾಗಿ ಬೆದರಿಕೆ

- Advertisement -

ಪೊಲೀಸರ ಎದುರು ಗೋರಕ್ಷಕನೆಂದು ಪರಿಚಯಿಸಿಕೊಂಡ ವ್ಯಕ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ಗೆ ದುಷ್ಕರ್ಮಿಗಳು ಮತ್ತೆ ಜೀವ ಬೆದರಿಕೆ ಹಾಕಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟನ ಆಪ್ತ ಸಹಾಯಕರಿಗೆ ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಇ-ಮೇಲ್‌ನಲ್ಲಿ ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಆರೋಪಿ ಬಂಧನಕ್ಕೊಳಗಾದ ಬೆನ್ನಲ್ಲೇ ಮತ್ತೊಂದು ಬೆದರಿಕೆ ಕರೆ ಬಂದಿದೆ.

ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಮುಂಬೈನ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿದ್ದ ರಾಜಸ್ತಾನ ಮೂಲದ ರಾಕಿ ಭಾಯ್‌ ಎಂಬಾತ ತಾನು ಗೋ ರಕ್ಷಕ ಎಂದು ಪರಿಚಯಿಸಿಕೊಂಡಿದ್ದಾನೆ. ಜೊತೆಗೆ ಏಪ್ರಿಲ್‌ 30ರಂದು ಸಲ್ಮಾನ್‌ ಖಾನ್‌ರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಪೊಲೀಸರು, “ಕರೆ ಮಾಡಿದ್ದ ವ್ಯಕ್ತಿ ತನ್ನನ್ನು ರಾಕಿ ಭಾಯ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಇದೇ ಏಪ್ರಿಲ್‌ 30ರಂದು ನಟನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಇದೇ ರಾಜಸ್ತಾನದ ಜೋಧ್‌ಪುರ ಮೂಲದ ಧಾಕಡ್‌ ರಾಮ್‌ ಬಿಷ್ಣೋಯಿ, ಸಲ್ಮಾನ್‌ ಅವರ ಆಪ್ತ ಸಹಾಯಕ ಪ್ರಶಾಂತ್‌ ಗುಂಜಾಲ್ಕರ್‌ಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಸಂದೇಶ ರವಾನಿಸಿದ್ದ. ಇದಾದ ಕೆಲವೇ ದಿನಕ್ಕೆ ರಾಜಸ್ತಾನ ಪೊಲೀಸರ ನೆರವಿನೊಂದಿಗೆ ಮುಂಬೈ ಪೊಲೀಸರು ಜೋಧ್‌ಪುರ ಬಳಿಯ ರೋಹಿಚಾ ಕಲನ್‌ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದರು. ಧಾಕಡ್‌ ರಾಮ್‌ ವಿಚಾರಣೆ ನಡೆಯುತ್ತಿರುವಾಗಲೇ ಸಲ್ಮಾನ್‌ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿರುವುದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ‘ಚೆನ್ನೈ ಎಕ್ಸ್‌ಪ್ರೆಸ್‌’ ನೆನಪಿಸುವ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಟ್ರೈಲರ್‌

ಏಪ್ರಿಲ್‌ 21ರಂದು ಸಲ್ಮಾನ್‌ ಖಾನ್‌ ನಟನೆಯ ಬಹು ನಿರೀಕ್ಷಿತ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ ತೆರೆಗೆ ಬರಲಿದೆ. ಜೀವ ಬೆರಿಕೆಯ ನಡುವೆಯೇ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಅವರು ಇತ್ತೀಚೆಗೆ ವಿದೇಶದಿಂದ ದುಬಾರಿ ಬೆಲೆಯ ಬುಲೆಟ್‌ ಪ್ರೂಫ್‌ ಕಾರನ್ನು ಆಮದು ಮಾಡಿಸಿಕೊಂಡಿದ್ದು, ಅದರಲ್ಲೇ ಸಂಚರಿಸುತ್ತಿದ್ದಾರೆ. ಮುಂಬೈ ಪೊಲೀಸರು ಸಲ್ಮಾನ್‌ ಖಾನ್‌ ಮತ್ತು ಕುಟುಂಬಸ್ಥರಿಗೆ ಭದ್ರತೆಯನ್ನು ಕೂಡ ಹೆಚ್ಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...