ಸದಾ ವಿವಾದಗಳಿಂದ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೂನಂ, 32ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಅವರ ಹಠಾತ್ ನಿಧನವು ಅಭಿಮಾನಿಗಳಿಗೆ ಆಘಾತ ನೀಡಿದೆ.
ಪೂನಂ ಪಾಂಡೆ ಅವರ ಇನ್ಸ್ಟಾಗ್ರಾಮ್ನಲ್ಲಿ ಅವರ ಕುಟುಂಬಸ್ಥರು ಪೋಸ್ಟ್ ಒಂದನ್ನು ಪ್ರಕಟಿಸಿದ್ದು, “ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್‌ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಿ” ಎಂದು ಬರೆಯಲಾಗಿದೆ.
View this post on Instagram
ಮಾಡೆಲ್ ಆಗಿದ್ದ ಪೂನಂ ಪಾಂಡೆ ಅವರು 2013ರಲ್ಲಿ ಬಾಲಿವುಡ್‌ಗೆ ಕಾಲಿಟ್ಟಿದ್ದರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಕೂಡ ಹಾಕಿದ್ದರು.
ತೆಲುಗು, ಭೋಜ್ಪುರಿ ಸಿನಿಮಾಗಳಲ್ಲಿ ಕೂಡ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಿರಲಿಲ್ಲ. ಆದರೆ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಂಡಿದ್ದರು.
ಇದನ್ನು ಓದಿದ್ದೀರಾ? ಕೇರಳ | ರಂಜಿತ್ ಶ್ರೀನಿವಾಸ್ ಕೊಲೆ ಪ್ರಕರಣ : ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಬೆದರಿಕೆ; ನಾಲ್ವರ ಬಂಧನ
2022ರಲ್ಲಿ ಪ್ರಸಾರ ಕಂಡಿದ್ದ ‘ಲಾಕ್ಅಪ್’ ಶೋನಲ್ಲಿ ಸ್ಪರ್ಧಿ ಆಗಿ ಪೂನಂ ಕಾಣಿಸಿಕೊಂಡಿದ್ದರು. ಆದರೆ ಪ್ರಶಸ್ತಿ ಗೆದ್ದಿರಲಿಲ್ಲ ಹಲವು ವಿವಾದಗಳಿಂದಾಗೆ ಪೂನಂ ಸದಾ ಸುದ್ದಿಯಲ್ಲಿರುತ್ತಿದ್ದರು.