ನಟ ಪುನೀತ್‌ ಜೊತೆ ನಟಿಸಿದ್ದ ಬಾಲಿವುಡ್‌ನ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ

Date:

ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ನಟನೆಯ ‘ಹುಡುಗರು’ ಚಿತ್ರದಲ್ಲಿ ‘ನಾ ಬೋರ್ಡು ಇರದ ಬಸ್ಸನು’ಹಾಡಿಗೆ ಹೆಜ್ಜೆ ಹಾಕಿದ್ದ ಬಾಲಿವುಡ್‌ನ ಖ್ಯಾತ ನಟಿ ಹಾಗೂ ಮಾಡೆಲ್​ ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

- Advertisement -

ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿಯಾಗಿದ್ದರು. 42 ವರ್ಷದ ಶೆಫಾಲಿ ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶೆಫಾಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಶೆಫಾಲಿ ಕೊನೆಯುಸಿರೆಳೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

1982ರ ಡಿಸೆಂಬರ್ 15ರಂದು ಜನಿಸಿದ ಶೆಫಾಲಿ ಬೆಳೆದಿದ್ದು ಮುಂಬೈನಲ್ಲಿ. 2004ರಲ್ಲಿ ಹರ್ಮೀತ್ ಸಿಂಗ್ ಜೊತೆ ಶೆಫಾಲಿ ವಿವಾಹ. ಆ ಬಳಿಕ ಪತಿಯೊಂದಿಗೆ ವಿಚ್ಛೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ಮದುವೆಯಾಗಿದ್ದರು.

2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್​ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು.

ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...