ಬಾಲಿವುಡ್‌ನ ಹಿರಿಯ ನಟ ಗೂಫಿ ಪೈಂತಲ್‌ ಇನ್ನಿಲ್ಲ

Date:

Advertisements
  • ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಗೂಫಿ ಪೈಂತಲ್‌
  • ಹಿರಿಯ ನಟನ ಅಗಲಿಕೆಗೆ ಕಂಬನಿ ಮಿಡಿದ ತಾರೆಯರು

ಬಾಲಿವುಡ್‌ನ ಹಿರಿಯ ನಟ ಗೂಫಿ ಪೈಂತಲ್‌ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಹಿರಿಯ ನಟನ ಸಾವಿನ ಬಗ್ಗೆ ಕುಟುಂಬಸ್ಥರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 79 ವರ್ಷದ ಗೂಫಿ ಅವರನ್ನು ಕೆಲ ದಿನಗಳ ಹಿಂದಷ್ಟೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದೇ ಹೇಳಲಾಗಿತ್ತು. ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಸಂಬಂಧಿ ಹಿತೇನ್‌ ಪೈಂತಲ್‌ ರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹಿರಿಯ ನಟನ ಅಗಲಿಕೆ ಬಾಲಿವುಡ್‌ನ ಹಲವು ತಾರೆಯರು ಕಂಬನಿ ಮಿಡಿದಿದ್ದಾರೆ.

70ರ ದಶಕದಲ್ಲಿ ಸಹಾಯಕ ನಿರ್ದೇಶಕನಾಗಿ ವೃತ್ತಿ ಬದುಕು ಪ್ರಾರಂಭಿಸಿದ್ದ ಗೂಫಿ ಪೈಂತಲ್‌, 1975ರಲ್ಲಿ ರಿಷಿ ಕಪೂರ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡ ʼರಫೂ ಚಕ್ಕರ್‌ʼ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ಬಾಲಿವುಡ್‌ ಪ್ರವೇಶಿಸಿದರು. ʼದಿಲ್ಲಗಿʼ, ʼದೇಸ್‌ ಪರ್‌ದೇಸ್‌ʼ ʼಸುಹಾಗ್‌ʼ, ʼಮೈದಾನ್‌-ಎ-ಜಂಗ್‌ʼ, ʼದಾವಾʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸುವ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರರಂಗಕ್ಕೆ ಗುಡ್‌ಬೈ ಹೇಳಿದ ಜೆಕೆ; ಕಾರಣವೇನು?

1988ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಬಿ.ಆರ್‌ ಚೋಪ್ರಾ ನಿರ್ದೇಶನದ ʼಮಹಾಭಾರತʼ ಧಾರಾವಾಹಿಯಲ್ಲಿ ಶಕುನಿಯ ಪಾತ್ರದಲ್ಲಿ ಕಾಣಿಸಿಕೊಂಡ ಗೂಫಿ, ಕಿರುತೆರೆ ಪ್ರೇಕ್ಷಕರಿಗೆ ʼಶಕುನಿ ಮಾಮʼನಾಗಿಯೇ ಚಿರಪರಿಚಿತರಾದರು. ಅದಾದ ಬಳಿಕ ಅವರು ಹೆಚ್ಚಾಗಿ ಸಿನಿಮಾಗಳಲ್ಲಿ ತೊಡಗಿಸಿಕೊಳ್ಳಲಿಲ್ಲ. ಬದಲಿಗೆ ಕಿರುತೆರೆಯಲ್ಲೇ ಮುಂದುವರೆದರು. ʼಕಾನೂನ್‌’, ʼಸೌದಾʼ, ʼಅಕ್ಬರ್‌ ಬೀರ್ಬಲ್‌ʼ, ʼಸಿಐಡಿʼ ಮುಂತಾದ ಜನಪ್ರಿಯ ಧಾರಾವಾಹಿಗಳಲ್ಲಿ ಮಿಂಚಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X