ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

Date:

ಇತ್ತೀಚೆಗಷ್ಟೇ ಕನ್ನಡದ ‘ಬಿಗ್‌ಬಾಸ್ ರಿಯಾಲಿಟಿ ಶೋ’ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದ ಪ್ರಕರಣದ ಬಳಿಕ, ರಾಜ್ಯಾದ್ಯಂತ ಇದು ವಿವಾದವಾಗಿ ಸುದ್ದಿಯಾಗಿತ್ತು. ಈ ಪ್ರಕರಣದಲ್ಲಿ ವರ್ತೂರು ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿ, ಜೈಲು ಶಿಕ್ಷೆ ಅನುಭವಿಸಿ ಮತ್ತೆ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದಾರೆ.

- Advertisement -

ಇದು ಇನ್ನೂ ಕೂಡ ಚರ್ಚೆಯಲ್ಲಿರುವಾಗಲೇ ಇನ್ನೋರ್ವ ಸ್ಪರ್ಧಾಳುವಾಗಿರುವ ತನಿಷಾ ಕುಪ್ಪಂಡ ವಿರುದ್ಧ ಭೋವಿ ಜನಾಂಗಕ್ಕೆ ಅವಹೇಳನ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

Drone Prathap and Tanisha

ಡ್ರೋನ್ ಪ್ರತಾಪ್ ಹಾಗೂ ತನಿಷಾ ಕುಪ್ಪಂಡ

ತನಿಷಾ ಅವರು, ಇನ್ನೋರ್ವ ಸ್ಪರ್ಧಾಳುವಾಗಿರುವ ಡ್ರೋನ್ ಪ್ರತಾಪ್ ಜೊತೆ ಮಾತನಾಡುವಾಗ ಭೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಭೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ(ಅಟ್ರಾಸಿಟಿ)ಯ ಅನ್ವಯ ತನಿಷಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿ ಭೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆ. ಹಾಗಾಗಿ, ತನಿಷಾ ಕುಪ್ಪಂಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಬಿಗ್‌ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...