‘ಕಾಸ್ಟಿಂಗ್ ಕೌಚ್’ಗೆ ಲಿಂಗಭೇದವಿಲ್ಲ, ಚಿತ್ರರಂಗಕ್ಕೆ ಮಾತ್ರವೇ ಸೀಮಿತವೂ ಅಲ್ಲ: ನಟಿ ರಮ್ಯಾ ಕೃಷ್ಣನ್ ಸ್ಫೋಟಕ ಹೇಳಿಕೆ

Date:

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹೆಗ್ಗಿಲ್ಲದೆ ನಡೆಯುತ್ತದೆ. ಇಂತಹ ಶೋಷಣೆಗೆ ಯಾವುದೇ ಲಿಂಗಭೇದವಿಲ್ಲ. ಇದು ಕೇವಲ ಸಿನಿಮಾ ರಂಗಕ್ಕೆ ಮಾತ್ರ ಸೀಮಿತವೂ ಆಗಿಲ್ಲ ಎಂದು ಬಹುಭಾಷಾ ನಟಿ ರಮ್ಯಾ ಕೃಷ್ಣನ್ ಹೇಳಿದ್ದಾರೆ.

- Advertisement -

ಅಂದಹಾಗೆ, ಸಿನಿಮಾಗಳಲ್ಲಿ ಅವಕಾಶ ನೀಡುವುದಾಗಿ ಆಮಿಷವೊಡ್ಡಿ ನಿರ್ಮಾಪಕರು, ನಿರ್ದೇಶಕರು ಅಥವಾ ಪ್ರಭಾವಿ ವ್ಯಕ್ತಿಗಳು ನಟ-ನಟಿಯರಿಂದ ಅಥವಾ ಹೊಸಬರಿಂದ ತಮ್ಮ ಕಾಮವಾಂಛೆಯನ್ನು ತೀರಿಸುವಂತೆ ಒತ್ತಾಯಿಸುವ ಕೃತ್ಯವನ್ನು ಚಿತ್ರರಂಗದಲ್ಲಿ ‘ಕಾಸ್ಟಿಂಗ್ ಕೌಚ್’ ಎನ್ನಲಾಗುತ್ತದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಮತ್ತು ತಂತ್ರಜ್ಞರು ಎದುರಿಸುತ್ತಿರುವ ಈ ಶೋಷಣೆಯನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಬಯಲಿಗೆಳೆದಿದೆ. ಆದಾಗ್ಯೂ, ಈ ‘ಕಾಸ್ಟಿಂಗ್‌ ಕೌಚ್‌’ ಮುಂದುವರೆದಿದ್ದು, ಈಗಲೂ ಹಲವರು ತಮ್ಮ ಕಹಿ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಇದೆಲ್ಲದರ ನಡುವೆ, ಇತ್ತೀಚೆಗೆ ‘ರಾ ಟಾಕ್ಸ್ ವಿತ್ ವಿಕೆ’ ಸಂದರ್ಶನದಲ್ಲಿ ಮಾತನಾಡಿದ ರಮ್ಯಾ ಕೃಷ್ಣನ್, “ಚಿತ್ರರಂಗದಲ್ಲಿ ಇಂತಹ ಶೋಷಣೆ ನಡೆಯುವುದೇ ಇಲ್ಲವೆಂದು ಈ ಹಿಂದೆ ಕೆಲವರು ವಾದಿಸಿದ್ದರು. ಆದರೆ, ಅದು ಸಂಪೂರ್ಣ ಸುಳ್ಳು” ಎಂದಿದ್ದಾರೆ.

ಅಮೆರಿಕದ ಕುಖ್ಯಾತ ‘ಎಪ್‌ಸ್ಟೀನ್ ಫೈಲ್ಸ್’ ಪ್ರಕರಣವನ್ನು ಉಲ್ಲೇಖಿಸಿದ ಅವರು, “ಮಹಿಳೆಯರು ಅತ್ಯಂತ ಮುಂದುವರಿದಿದ್ದಾರೆ ಎನ್ನಲಾಗುವ ಅಮೆರಿಕದಂತಹ ದೇಶದಲ್ಲೇ ‘ಎಪ್ಸ್ಟೀನ್‌ ಫೈಲ್‌’ನಂತಹ ಕೃತ್ಯಗಳು ನಡೆಯಲು ಸಾಧ್ಯವಿರುವಾಗ, ಭಾರತದಲ್ಲಿಯೂ ಅದು ನಡೆಯುವುದರಲ್ಲಿ ಆಶ್ಚರ್ಯವಿಲ್ಲ” ಎಂದು ಹೇಳಿದ್ದಾರೆ.

“ಇಂತಹ ಘಟನೆಗಳು ಹಿಂದೆಯೂ ನಡೆದಿವೆ, ಈಗಲೂ ನಡೆಯುತ್ತಿವೆ ಮತ್ತು ಮುಂದೆಯೂ ನಡೆಯುತ್ತಲೇ ಇರುತ್ತವೆ. ಆದರೆ ಅದು ಹೇಗೆ ನಡೆಯುತ್ತದೆ, ಅಂದರೆ ಒಪ್ಪಿಕೊಳ್ಳುವ ಅಥವಾ ನಿರಾಕರಿಸುವ ಆಯ್ಕೆ ನಿಮಗೆ ಇರುತ್ತದೆಯೇ ಎಂಬುದು ಕಾಲಕ್ಕೆ ತಕ್ಕಂತೆ ಬದಲಾಗುತ್ತದೆ. ಬಲವಂತದಿಂದಲೋ, ಸ್ವಇಚ್ಛೆಯಿಂದಲೋ ಅಥವಾ ಸಹಜವೆಂಬಂತೆಯೋ ಇದು ನಡೆಯುತ್ತಲೇ ಇರುತ್ತದೆ; ಇದನ್ನು ಯಾರಿಂದಲೂ ನಿರಾಕರಿಸಲು ಸಾಧ್ಯವಿಲ್ಲ” ಎಂದು ರಮ್ಯಾ ಕೃಷ್ಣನ್ ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

“ಈ ದೌರ್ಜನ್ಯವನ್ನು ಕೇವಲ ‘ಕಾಸ್ಟಿಂಗ್ ಕೌಚ್’ ಎಂದು ಕರೆಯುವುದೇ ಸರಿಯಲ್ಲ. ಸಿನಿಮಾ ಎಂಬುದು ಆಕರ್ಷಕ ಮತ್ತು ಸದಾ ಸುದ್ದಿಯಲ್ಲಿರುವ ಕ್ಷೇತ್ರ. ಇಲ್ಲಿ ನಡೆಯುವ ಘಟನೆಗಳು ಬೇಗನೆ ಸಾರ್ವಜನಿಕರ ಗಮನಕ್ಕೆ ಬರುತ್ತವೆ. ಆದರೆ, ಮಹಿಳೆಯರು ಎಲ್ಲೆಡೆಯೂ ಇಂತಹ ಕಿರುಕುಳವನ್ನು ಎದುರಿಸುತ್ತಿದ್ದಾರೆ; ಕುಟುಂಬಗಳ ಒಳಗೆ ಮತ್ತು ಇತರ ಕೆಲಸದ ಸ್ಥಳಗಳಲ್ಲೂ ಇದು ನಡೆಯುತ್ತಿದೆ. ‘ಕಾಸ್ಟಿಂಗ್ ಕೌಚ್’ ಎಂಬ ಪದವು ಕೇವಲ ಸಿನಿಮಾ ಕ್ಷೇತ್ರದಲ್ಲಿ ಮಾತ್ರವೇ ಇಂತಹ ಶೋಷಣೆ ನಡೆಯುತ್ತದೆ ಎಂಬ ತಪ್ಪು ಅರ್ಥ ನೀಡುತ್ತದೆ. ವಾಸ್ತವದಲ್ಲಿ ಈ ಶೋಷಣೆ ಎಲ್ಲ ಕ್ಷೇತ್ರಗಳಲ್ಲೂ ಇದೆ ಮತ್ತು ಮಹಿಳೆಯರು ಮಾತ್ರವಲ್ಲದೆ ಪುರುಷರು ಕೂಡ ಇದಕ್ಕೆ ಬಲಿಯಾಗುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಅಂದಹಾಗೆ, 2017ರಲ್ಲಿ ಮಲಯಾಳಂ ಚಿತ್ರರಂಗದ ನಟಿಯೊಬ್ಬರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ನಂತರ, ಅಂದಿನ ಕೇರಳ ಸರ್ಕಾರವು ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕಾಗಿ ನಿವೃತ್ತ ನ್ಯಾಯಮೂರ್ತಿ ಕೆ. ಹೇಮಾ ಅವರ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸಿತ್ತಾದರೂ, ಸುಮಾರು ನಾಲ್ಕೂವರೆ ವರ್ಷಗಳ ಕಾಲ ಅದನ್ನು ಬಹಿರಂಗಪಡಿಸಿರಲಿಲ್ಲ. ಅಂತಿಮವಾಗಿ, 2024ರ ಆಗಸ್ಟ್‌ನಲ್ಲಿ ಈ ವರದಿಯನ್ನು ಸಾರ್ವಜನಿಕಗೊಳಿಸಲಾಯಿತು. ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ, ಶೌಚಾಲಯದಂತಹ ಮೂಲಭೂತ ಸೌಕರ್ಯಗಳ ಕೊರತೆ, ಲಿಂಗ ತಾರತಮ್ಯ, ಸಂಭಾವನೆಯಲ್ಲಿನ ಅಸಮಾನತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಕಾನೂನುಬದ್ಧ ಪ್ರಾಧಿಕಾರದ ಕೊರತೆಯ ಕುರಿತು ಈ ವರದಿಯು ಗಂಭೀರ ಬೆಳಕು ಚೆಲ್ಲಿತ್ತು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

ವಿಜಯಪುರ |ಪಂಚಮಸಾಲಿ ಮೀಸಲಾತಿ ಹೋರಾಟ: ಡಿ.10ರಂದು

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಎದುರು...

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...