ಬೆದರಿಕೆ ಪ್ರಕರಣ : ನಟ ಸುದೀಪ್‌ ಮಾಜಿ ಕಾರು ಚಾಲಕನ ವಿಚಾರಣೆ

Date:

ಖಾಸಗಿ ವಿಡಿಯೋ ಹರಿ ಬಿಡುವುದಾಗಿ ಅಪರಿಚಿತರಿಂದ ಬೆದರಿಕೆ

- Advertisement -

ಬೆದರಿಕೆ ಪತ್ರದ ಹಿಂದಿರುವ ವ್ಯಕ್ತಿಯ ಬಗ್ಗೆ ಗೊತ್ತು ಎಂದಿದ್ದ ಸುದೀಪ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಟ ಸುದೀಪ್‌ ಅವರ ಮಾಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ಶುಕ್ರವಾರ ವಿಚಾರಣೆ ನಡೆಸಿದ್ದಾರೆ. ಆದರೆ, ಸುದೀಪ್‌ ಅವರಿಗೆ ಬಂದಿರುವ ಬೆದರಿಕೆ ಪತ್ರಗಳಿಗೂ ಆತನಿಗೂ ಯಾವುದೇ ಸಂಬಂಧವಿಲ್ಲ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಇತ್ತೀಚೆಗೆ ಸುದೀಪ್‌ ಅವರ ಪುಟ್ಟೇನಹಳ್ಳಿ ನಿವಾಸಕ್ಕೆ ಅಪರಿಚಿತರಿಂದ ಎರಡು ಬೆದರಿಕೆ ಪತ್ರಗಳು ಬಂದಿದ್ದವು. ನಟನ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಕಿಡಿಗೇಡಿಗಳು ಬೆದರಿಕೆ ಹಾಕಿದ್ದರು. ಈ ಸಂಬಂಧ ಸುದೀಪ್‌ ಅವರ ಆಪ್ತ ಸಹಾಯಕ ಜಾಕ್‌ ಮಂಜು ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದರು. ಜೊತೆಗೆ ನಟನ ಮಾಜಿ ಕಾರು ಚಾಲಕನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದಾದ ಕೆಲ ದಿನಗಳ ನಂತರ ಪ್ರಕರಣ ಸಿಸಿಬಿಗೆ ವರ್ಗಾವಣೆಗೊಂಡಿತ್ತು.

ಈ ಹಿನ್ನೆಲೆ ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಸುದೀಪ್‌ ಅವರ ಮಾಜಿ ಕಾರು ಚಾಲಕನ್ನು ಕರೆದು ವಿಚಾರಣೆಗೆ ನಡೆಸಿದ್ದು, ಆತನ ಮೊಬೈಲ್‌ ಅನ್ನು ಕೂಡ ಪರಿಶೀಲಿಸಿದ್ದಾರೆ. ಆದರೆ, ಆತ 3 ವರ್ಷಗಳ ಹಿಂದೆಯೇ ಸುದೀಪ್‌ ಬಳಿ ಕೆಲಸ ಬಿಟ್ಟಿರುವುದಾಗಿ ತಿಳಿಸಿದ್ದಾನೆ. ಸುದೀರ್ಘ ವಿಚಾರಣೆಯ ಬಳಿಕ ಆತನಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಸುದ್ದಿ ಓದಿದ್ದೀರಾ? ‘ಟ್ವಿಟರ್‌ ಬ್ಲೂಟಿಕ್‌’ಗೆ ಬೈ ಹೇಳಿದ ಪ್ರಕಾಶ್‌ ರಾಜ್‌

ಬೆದರಿಕೆ ಪತ್ರದ ವಿಚಾರಕ್ಕೆ ಸಂಬಂಧಿಸಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಸುದೀಪ್‌, “ಸಿನಿಮಾ ರಂಗದವರೇ ಬೆದರಿಕೆ ಪತ್ರ ಕಳುಹಿಸಿದ್ದಾರೆ. ಈ ಕೃತ್ಯದ ಹಿಂದಿರುವ ವ್ಯಕ್ತಿ ಯಾರು ಎಂಬುದು ನನಗೆ ಗೊತ್ತಿದೆ. ಅವರಿಗೆ ಕಾನೂನಾತ್ಮಕವಾಗಿಯೇ ಉತ್ತರ ಕೊಡುತ್ತೇನೆ ಎಂದಿದ್ದರು. ಆದರೆ, ಪ್ರಕರಣ ದಾಖಲಾಗಿ ತಿಂಗಳು ಕಳೆಯುತ್ತ ಬಂದರೂ ಆರೋಪಿಗಳ ಸುಳಿವಿಲ್ಲ. ಹೀಗಾಗಿ ಸುದೀಪ್‌ ಅವರಿಗೆ ಬೆದರಿಕೆ ಹಾಕಿದವರ ಬಗ್ಗೆ ಮಾಹಿತಿ ಎಂದಾದರೆ, ಅವರು ಪೊಲೀಸರಿಗೆ ತಿಳಿಸಬೇಕು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

ಕಳೆದ ಮಾರ್ಚ್‌ನಲ್ಲಿ ದೊಮ್ಮಲೂರಿನ ಅಂಚೆ ಕಚೇರಿಗೆ ನಕಲಿ ನಂಬರ್‌ ಪ್ಲೇಟ್‌ ಹೊಂದಿದ್ದ ಸ್ವಿಫ್ಟ್‌ ಕಾರಿನಲ್ಲಿ ಬಂದ ಕಿಡಿಗೇಡಿಗಳು ಅಂಚೆ ಡಬ್ಬದಲ್ಲಿ ಪತ್ರವನ್ನು ಹಾಕಿ ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ. ಕೆಲ ದಿನಗಳ ಬಳಿಕ ಅಂಚೆ ಸೇವೆಯ ಮೂಲಕ ಪತ್ರ ಸುದೀಪ್‌ ಅವರ ನಿವಾಸ ತಲುಪಿತ್ತು. ಖಾಸಗಿ ವಿಡಿಯೋ ಬಹಿರಂಗ ಪಡಿಸುವ ಬೆದರಿಕೆ ಪತ್ರ ಕೈಸೇರಿದ ಬೆನ್ನಲ್ಲೇ ಹೈಕೋರ್ಟ್‌ ಮೊರೆ ಹೋಗಿದ್ದ ಸುದೀಪ್‌, ತಮ್ಮ ಘನತೆಗೆ ಧಕ್ಕೆಯುಂಟು ಮಾಡುವ ಸುದ್ದಿಗಳ ಪ್ರಸಾರಕ್ಕೆ ತಡೆಯಾಜ್ಞೆ ತಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...