ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

Date:

Advertisements
  • ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಿಶೋರ್‌ ಆಗ್ರಹ
  • ಹಳ್ಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದ ನಟ

ಒಡಿಶಾದ ಬಾಲಸೋರ್‌ ಬಳಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಬಹುಭಾಷಾ ನಟ ಕಿಶೋರ್‌ ಸಂತಾಪ ಸೂಚಿಸಿದ್ದಾರೆ. ರೈಲು ದುರಂತಕ್ಕೆ ಸಂಬಂಧಿಸಿದ ಪತ್ರಿಕಾ ವರದಿಯೊಂದನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆಡಳಿತಾರೂಢ ಸರ್ಕಾರಗಳು ಅಪಘಾತ, ದುರಂತಗಳನ್ನು ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈಲು ದುರಂತದ ಕುರಿತು ದೀರ್ಘ ಲೇಖನವನ್ನೇ ಬರೆದಿರುವ ಕಿಶೋರ್‌, “ಯಾರ ಮೇಲೆ ಕಠಿಣ ಕ್ರಮ? ಯಾರು ಕಾರಣ?
ಇಷ್ಟು ಭೀಕರ ಸಾವು ನೋವು ತಡೆಗಟ್ಟಬಹುದಿತ್ತೇ? ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರ ಮತ್ತು 1,500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ, ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಬಹುದಿತ್ತಲ್ಲ?

ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ‘ಕವಚ’ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತಲ್ಲ” ಎಂದು ಕೇಂದ್ರ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ.

Advertisements

“ಹಾಗೆ ನೋಡಿದರೆ ಕಳೆದ 6-7 ವರ್ಷಗಳಲ್ಲಿ 1,000 ಕ್ಕೂ ಹೆಚ್ಚು ರೈಲು ಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2021ರ ʼಸಿಎಜಿʼ ವರದಿಯನ್ನು ಕಡೆಗಣಿಸಿ ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೇ? ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ. ಎಂಥ ವಿಪರ್ಯಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾಸೀರುದ್ದೀನ್‌ ಶಾ ಮನೆಯ ಬಚ್ಚಲು ಕೋಣೆ ಬಾಗಿಲಿಗೆ ಹಿಡಿಕೆಯಾದ ʼಫಿಲ್ಮ್‌ ಫೇರ್‌ʼ ಪ್ರಶಸ್ತಿ

ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಿಶೋರ್‌, “ಮೂರ್ಖ ಸರ್ಕಾರದ, ನಾಲಾಯಕ್ಕು ಮಂತ್ರಿಗಳ, ಪ್ರಜೆಗಳೆಲ್ಲ ಬರೀ ಮತಗಳಂತೆ ಕಾಣುವ ಪ್ರಚಾರಿ ಪ್ರಧಾನಿಯ ಸಂಕುಚಿತ ದೃಷ್ಟಿಯನ್ನು ಮುಚ್ಚಿ ಹಾಕಲು ಹೋಗಿ ಆಡಳಿತ ಪಕ್ಷ ಮತ್ತದರ ಬೂಟು ನೆಕ್ಕುವ ಮಾಧ್ಯಮಗಳು ಇಮೇಜ್ ಮ್ಯಾನೇಜ್‌ಮೆಂಟ್‌ ಮಾಡುತ್ತಾ, ತಪ್ಪನ್ನೂ ಸರಿಯೆಂದು ಸಾಧಿಸ ಹೊರಟರೆ ಕಳೆದುಕೊಂಡ ಪ್ರಾಣಗಳಿಗೆ, ನೊಂದು ಜರ್ಜರಿತವಾದ ಕುಟುಂಬಗಳ ಕಣ್ಣೀರಿಗೆ ಅರ್ಥವಿಲ್ಲದೇ ಹೋದೀತು. ಮಡಿದ ನೂರಾರು ಅಮಾಯಕರ ಜೀವಗಳಿಗೆ ಅಶ್ರುತರ್ಪಣ. ಇನ್ನಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಅಪಘಾತ, ದುರಂತಗಳನ್ನು ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X