ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

Date:

  • ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಿಶೋರ್‌ ಆಗ್ರಹ
  • ಹಳ್ಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದ ನಟ

ಒಡಿಶಾದ ಬಾಲಸೋರ್‌ ಬಳಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಬಹುಭಾಷಾ ನಟ ಕಿಶೋರ್‌ ಸಂತಾಪ ಸೂಚಿಸಿದ್ದಾರೆ. ರೈಲು ದುರಂತಕ್ಕೆ ಸಂಬಂಧಿಸಿದ ಪತ್ರಿಕಾ ವರದಿಯೊಂದನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆಡಳಿತಾರೂಢ ಸರ್ಕಾರಗಳು ಅಪಘಾತ, ದುರಂತಗಳನ್ನು ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈಲು ದುರಂತದ ಕುರಿತು ದೀರ್ಘ ಲೇಖನವನ್ನೇ ಬರೆದಿರುವ ಕಿಶೋರ್‌, “ಯಾರ ಮೇಲೆ ಕಠಿಣ ಕ್ರಮ? ಯಾರು ಕಾರಣ?
ಇಷ್ಟು ಭೀಕರ ಸಾವು ನೋವು ತಡೆಗಟ್ಟಬಹುದಿತ್ತೇ? ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರ ಮತ್ತು 1,500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ, ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಬಹುದಿತ್ತಲ್ಲ?

ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ‘ಕವಚ’ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತಲ್ಲ” ಎಂದು ಕೇಂದ್ರ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಾಗೆ ನೋಡಿದರೆ ಕಳೆದ 6-7 ವರ್ಷಗಳಲ್ಲಿ 1,000 ಕ್ಕೂ ಹೆಚ್ಚು ರೈಲು ಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2021ರ ʼಸಿಎಜಿʼ ವರದಿಯನ್ನು ಕಡೆಗಣಿಸಿ ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೇ? ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ. ಎಂಥ ವಿಪರ್ಯಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾಸೀರುದ್ದೀನ್‌ ಶಾ ಮನೆಯ ಬಚ್ಚಲು ಕೋಣೆ ಬಾಗಿಲಿಗೆ ಹಿಡಿಕೆಯಾದ ʼಫಿಲ್ಮ್‌ ಫೇರ್‌ʼ ಪ್ರಶಸ್ತಿ

ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಿಶೋರ್‌, “ಮೂರ್ಖ ಸರ್ಕಾರದ, ನಾಲಾಯಕ್ಕು ಮಂತ್ರಿಗಳ, ಪ್ರಜೆಗಳೆಲ್ಲ ಬರೀ ಮತಗಳಂತೆ ಕಾಣುವ ಪ್ರಚಾರಿ ಪ್ರಧಾನಿಯ ಸಂಕುಚಿತ ದೃಷ್ಟಿಯನ್ನು ಮುಚ್ಚಿ ಹಾಕಲು ಹೋಗಿ ಆಡಳಿತ ಪಕ್ಷ ಮತ್ತದರ ಬೂಟು ನೆಕ್ಕುವ ಮಾಧ್ಯಮಗಳು ಇಮೇಜ್ ಮ್ಯಾನೇಜ್‌ಮೆಂಟ್‌ ಮಾಡುತ್ತಾ, ತಪ್ಪನ್ನೂ ಸರಿಯೆಂದು ಸಾಧಿಸ ಹೊರಟರೆ ಕಳೆದುಕೊಂಡ ಪ್ರಾಣಗಳಿಗೆ, ನೊಂದು ಜರ್ಜರಿತವಾದ ಕುಟುಂಬಗಳ ಕಣ್ಣೀರಿಗೆ ಅರ್ಥವಿಲ್ಲದೇ ಹೋದೀತು. ಮಡಿದ ನೂರಾರು ಅಮಾಯಕರ ಜೀವಗಳಿಗೆ ಅಶ್ರುತರ್ಪಣ. ಇನ್ನಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಅಪಘಾತ, ದುರಂತಗಳನ್ನು ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದೀಪ್ ಮಾತು

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಆತನ ತಂಡ ಬರ್ಬರವಾಗಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ಮರಣೋತ್ತರ ಪರೀಕ್ಷೆಯಲ್ಲಿ ದೇಹದ 15 ಕಡೆಗಳಲ್ಲಿ ಗಾಯದ ಗುರುತು

ಬೆಂಗಳೂರಿನ ಆರ್ ಆರ್ ನಗರದಲ್ಲಿ ಚಿತ್ರನಟ ದರ್ಶನ್ ಮತ್ತು ತಂಡದಿಂದ ಇತ್ತೀಚೆಗೆ...

ಚನ್ನಪಟ್ಟಣ ಉಪಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಸಲು ಡಿಕೆ ಸಹೋದರರು ಯೋಜಿಸಿದ್ದರು: ಸಿಪಿ ಯೋಗೇಶ್ವರ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ...

ಚೆನ್ನೈನಲ್ಲಿ ತಮಿಳು ನಟ ಅನುಮಾನಾಸ್ಪದ ಸಾವು

ತಮಿಳು ನಟ ಪ್ರದೀಪ್ ಕೆ ವಿಜಯನ್‌(39) ಅವರು ಚೆನ್ನೈನ ತಮ್ಮ ಮನೆಯಲ್ಲಿ...