ಚೆಕ್ ಬೌನ್ಸ್ ಪ್ರಕರಣ | ನಟಿ ಪದ್ಮಜಾ ರಾವ್‌ಗೆ ಮೂರು ತಿಂಗಳು ಜೈಲು ಶಿಕ್ಷೆ

Date:

ಕಿರುತೆರೆ ಹಾಗೂ ಸಿನಿಮಾದ ಹಿರಿಯ ನಟಿ ಪದ್ಮಜಾ ರಾವ್‌ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯವು ಪದ್ಮಜಾ ರಾವ್ ಅವರಿಗೆ 40.20 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಈ ದಂಡ ಕಟ್ಟಲು ವಿಫಲರಾದರೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

- Advertisement -

2021ರಲ್ಲಿ ತುಳು ಚಿತ್ರ ನಿರ್ದೇಶಕ, ನಟ ವೀರೇಂದ್ರ ಶೆಟ್ಟಿ ಕಾವೂರು ಅವರು ನಟಿ ಪದ್ಮಜಾ ರಾವ್ ತನ್ನಿಂದ 41 ಲಕ್ಷ ರೂ. ಹಣ ಪಡೆದು, ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವೀರೇಂದ್ರ ಶೆಟ್ಟಿಯವರ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಟಿ ಪದ್ಮಜಾ ಹಂತ ಹಂತವಾಗಿ 41 ಲಕ್ಷ ರೂ. ಸಾಲವನ್ನು ಪಡೆದಿದ್ದರು. ಈ ಸಾಲದ ಭದ್ರತೆಗಾಗಿ 40 ಲಕ್ಷ ರೂಪಾಯಿಯ ಚೆಕ್ ನೀಡಿದ್ದರು.

ಇದನ್ನು ಓದಿದ್ದೀರಾ? ‘ರವಿಕೆ ಪ್ರಸಂಗ’ ರಿವ್ಯೂ: ಅವಿವಾಹಿತ ಹೆಣ್ಣಿನ ಹಾಡು-ಪಾಡು

ಪದ್ಮಜಾ ರಾವ್ ಅವರು ಸಾಲ ಹಿಂತಿರುಗಿಸಿದ ಕಾರಣ ವೀರೇಂದ್ರ ಅವರು ಆ ಚೆಕ್​ ಮೂಲಕ ಹಣ ಪಡೆಯಲು ಮುಂದಾಗಿದ್ದಾರೆ. ಆದರೆ ಬ್ಯಾಂಕ್‌ನಲ್ಲಿ ಹಣವಿಲ್ಲದೆ ಚೆಕ್ ಬೌನ್ಸ್ ಆಗಿದೆ. ಹೀಗಾಗಿ ವೀರೇಂದ್ರ ಶೆಟ್ಟಿ ಕೋರ್ಟ್ ಮೆಟ್ಟಿಲೇರಿದ್ದರು.

ಆದರೆ ಪದ್ಮಜಾ ರಾವ್ ಅವರು “ನಾನು ಯಾವುದೇ ಸಾಲ ಪಡೆದಿಲ್ಲ. ಚೆಕ್ ಅನ್ನು ಕೂಡಾ ನೀಡಿಲ್ಲ. ನನ್ನ ಮನೆಯಿಂದ ಚೆಕ್ ಕಳವು ಮಾಡಿ ಪೋರ್ಜರಿ ಮಾಡಲಾಗಿದೆ” ಎಂದು ಹೇಳಿದ್ದರು.

ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯವು ನಟಿ ಪದ್ಮಜಾ ರಾವ್ ಅವರಿಗೆ 40.20 ಲಕ್ಷ ರೂ. ದಂಡ ಅಥವಾ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ. 40.20 ಲಕ್ಷ ರೂಪಾಯಿಯಲ್ಲಿ 40.17 ಲಕ್ಷ ರೂಪಾಯಿಯನ್ನು ದೂರುದಾರ ವೀರೇಂದ್ರ ಶೆಟ್ಟಿ ಅವರಿಗೆ ಹಾಗೂ ಉಳಿದ ಮೂರು ಸಾವಿರವನ್ನು ರಾಜ್ಯದ ಬೊಕ್ಕಸಕ್ಕೆ ತುಂಬಲು ನ್ಯಾಯಾಲಯ ತಿಳಿಸಿದೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...