ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹೊತ್ತುಕೊಂಡಿರುವ ನಟ – ಹೋರಾಟಗಾರ ಚೇತನ್ ಅಹಿಂಸಾಗೆ ಕರ್ನಾಟಕ ಹೈಕೋರ್ಟ್ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿದೆ.
ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆ ಕೇಂದ್ರ ಸರ್ಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು. ಆದರೆ ಚೇತನ್ ಅವರಿಂದ ಸಮಾಧಾನಕರ ಉತ್ತರ ಸಿಗದ ಹಿನ್ನೆಲೆ 2018 ರಲ್ಲಿ ನೀಡಿದ್ದ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ಅನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಚೇತನ್ ಅಹಿಂಸಾ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಸುದ್ದಿ ಓದಿದ್ದೀರಾ? ಪರೀಕ್ಷೆ ನಡೆಸದೆ ಫಲಿತಾಂಶ; ಕುವೆಂಪು ವಿವಿ ಕುಲಪತಿ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಅದರಂತೆ ಕೋರ್ಟ್ ಏ.21 ರಂದು ಚೇತನ್ಗೆ ಷರತ್ತುಬದ್ಧ ರಿಲೀಫ್ ನೀಡಿತ್ತು. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡುವಂತಿಲ್ಲ, ಬಾಕಿಯಿರುವ ಕೇಸ್ಗಳ ಬಗ್ಗೆಯೂ ಟ್ವೀಟ್ ಮಾಡುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ, ಷರತ್ತು ಪಾಲಿಸಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ವಕೀಲರು ಕೋರ್ಟ್ ಮುಂದೆ ಹೇಳಿದ್ದಾರೆ.
ವಾದ ಆಲಿಸಿದ ಹೈಕೋರ್ಟ್, ಈ ಹಿಂದೆ ನೀಡಿದ್ದ ಮಧ್ಯಂತ ತಡೆಯಾಜ್ಞೆಯನ್ನು ಜೂನ್ 20ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಅಲ್ಲದೆ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.