ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅಹಿಂಸಾಗೆ ಮತ್ತೆ ಬಿಗ್ ರಿಲೀಫ್: ಕರ್ನಾಟಕ ಹೈಕೋರ್ಟ್‌ನಿಂದ ತಡೆಯಾಜ್ಞೆ ವಿಸ್ತರಣೆ

Date:

ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹೊತ್ತುಕೊಂಡಿರುವ ನಟ – ಹೋರಾಟಗಾರ ಚೇತನ್​ ಅಹಿಂಸಾಗೆ ಕರ್ನಾಟಕ ಹೈಕೋರ್ಟ್ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿದೆ. 

- Advertisement -

ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆ ಕೇಂದ್ರ ಸರ್ಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು. ಆದರೆ ಚೇತನ್ ಅವರಿಂದ ಸಮಾಧಾನಕರ ಉತ್ತರ ಸಿಗದ ಹಿನ್ನೆಲೆ 2018 ರಲ್ಲಿ ನೀಡಿದ್ದ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ಅನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಚೇತನ್ ಅಹಿಂಸಾ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಪರೀಕ್ಷೆ ನಡೆಸದೆ ಫಲಿತಾಂಶ; ಕುವೆಂಪು ವಿವಿ ಕುಲಪತಿ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಅದರಂತೆ ಕೋರ್ಟ್ ಏ.21 ರಂದು ಚೇತನ್​ಗೆ ಷರತ್ತುಬದ್ಧ ರಿಲೀಫ್ ನೀಡಿತ್ತು. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡುವಂತಿಲ್ಲ, ಬಾಕಿಯಿರುವ ಕೇಸ್​​ಗಳ ಬಗ್ಗೆಯೂ ಟ್ವೀಟ್ ಮಾಡುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ, ಷರತ್ತು ಪಾಲಿಸಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ವಕೀಲರು ಕೋರ್ಟ್ ಮುಂದೆ ಹೇಳಿದ್ದಾರೆ.

ವಾದ ಆಲಿಸಿದ ಹೈಕೋರ್ಟ್, ಈ ಹಿಂದೆ ನೀಡಿದ್ದ ಮಧ್ಯಂತ ತಡೆಯಾಜ್ಞೆಯನ್ನು ಜೂನ್ 20ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಅಲ್ಲದೆ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...