ಕ್ರಿಸ್‌ಮಸ್‌ ಸ್ಪೆಷಲ್‌: ಡಿ.25ರಂದು ಬಹು ನಿರೀಕ್ಷಿತ ಮಲ್ಟಿಸ್ಟಾರರ್ ಚಿತ್ರ “45” ತೆರೆಗೆ

Date:

ಸ್ಯಾಂಡಲ್‌ವುಡ್‌ ಹಿರಿಯ ನಟ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ ಮಲ್ಟಿ ಸ್ಟಾರರ್‌ ಚಿತ್ರ “45”, ಕ್ರಿಸ್‌ಮಸ್‌ ಸ್ಪೆಷಲ್‌ ಆಗಿ ಇದೇ ಡಿ.25ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

- Advertisement -

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದಲ್ಲಿ ಹಾಗೂ ಎಂ ರಮೇಶ್ ರೆಡ್ಡಿ ಅವರ ಸೂರಜ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಎಲ್ಲಾ ಕಡೆಗಳಿಂದಲೂ ಅಪಾರ ‌ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಡುಗಳಿಗೂ ಜನರು ಮನ ಸೋತ್ತಿದ್ದಾರೆ. ನಮ್ಮ ಚಿತ್ರಕ್ಕೆ ಆರಂಭದಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿರುವ ಎಲ್ಲರಿಗೂ ಧನ್ಯವಾದ. ನಾನು ಸಿನಿಮಾ‌ ನೋಡಿದ್ದೇನೆ. ನಿರ್ಮಾಪಕನಾಗಿ ನನಗೆ ಬಹಳ‌ ಸಂತೋಷವಾಗಿದೆ. ಚಿತ್ರ ಬಿಡುಗಡೆಯಾಗುತ್ತಿರುವ ಈ ಸಮಯದಲ್ಲಿ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ್ದ ಪ್ರತಿಯೊಬ್ಬರಿಗೂ ನನ್ಮ ಧನ್ಯವಾದ. ಶಿವರಾಜಕುಮಾರ್ ಅವರಿಗೆ ವಿಶೇಷ ಧನ್ಯವಾದ ಹೇಳಬೇಕು. ಅವರಿಗೆ ಆರೋಗ್ಯದ ಸಮಸ್ಯೆ ಇದ್ದರೂ ಚಿತ್ರಕ್ಕೆ ತೊಂದರೆ ಆಗಬಾರದೆಂದು ತಮ್ಮ ಕೆಲಸಗಳನ್ನು ಪೂರೈಸಿ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದರು. ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರ ಸಹಕಾರ ಕೂಡ ಅಪಾರ. ಅರ್ಜುನ್ ಜನ್ಯ ಅವರು ಮೂರು ವರ್ಷಗಳಿಂದ ನಮ್ಮ ಚಿತ್ರಕ್ಕಾಗಿ ಪಟ್ಟಿರುವ ಶ್ರಮ ಅಷ್ಟಿಷ್ಟಲ್ಲ. ಅವರ ಶ್ರಮ ಸಾರ್ಥಕ ಆಗಿದೆ. ಇನ್ನು ಚಿತ್ರವನ್ನು ಕರ್ನಾಟಕದಲ್ಲಿ ಕೆವಿಎನ್ ಸಂಸ್ಥೆ ವಿತರಣೆ ಮಾಡುತ್ತಿದೆ. ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳದಲ್ಲೂ ಜನಪ್ರಿಯ ಸಂಸ್ಥೆಗಳು ವಿತರಣೆ ಮಾಡುತ್ತಿದೆ. ಉತ್ತರ ಭಾರತದಲ್ಲಿ ಜೀ ಸ್ಟುಡಿಯೋಸ್ ವಿತರಣೆ ಮಾಡುತ್ತಿದ್ದು, ಸಿನಿಮಾದ ಸ್ಯಾಟಲೈಟ್ ರೈಟ್ಸ್ ಕೂಡ ಅದೇ ಜೀಸಂಸ್ಥೆ ತೆಗೆದುಕೊಂಡಿದೆ. ಅವರೆಲ್ಲರಿಗೂ ನಾನು ಆಭಾರಿ” ಎಂದರು ನಿರ್ಮಾಪಕ ರಮೇಶ್ ರೆಡ್ಡಿ.

ನಟ ಶಿವರಾಜಕುಮಾರ್ ಮಾತನಾಡಿ, “ಅರ್ಜುನ್ ಜನ್ಯ ಅವರು ಮೊದಲು ಕಥೆ ನನಗೆ ಹೇಳಿದ್ದು. ಕಥೆ ಹೇಳಿದ್ದಕ್ಕಿಂತ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ರಮೇಶ್ ರೆಡ್ಡಿ ಅವರು ಯಾವುದೇ ಕೊರತೆ ಬಾರದ ಹಾಗೆ ಸಿನಿಮಾ ಮಾಡಿ ಕೊಟ್ಟಿದ್ದಾರೆ. ಇದು ಕೇವಲ ನನ್ನ ಸಿನಿಮಾ ಮಾತ್ರ ಅಲ್ಲ. ನಮ್ಮ ಸಿನಿಮಾ. ಉಪೇಂದ್ರ, ರಾಜ್ ಬಿ ಶೆಟ್ಟಿ ಅವರ ಅಭಿನಯ ಹಾಗೂ ಸತ್ಯ ಹೆಗಡೆ ಅವರ ಛಾಯಾಗ್ರಹಣ ಚೆನ್ನಾಗಿದೆ. ಇದೊಂದು ಜೀವನದ ಮೌಲ್ಯವನ್ನು ತಿಳಿಸುವ ಚಿತ್ರ” ಎಂದರು.

ಇದನ್ನೂ ಓದಿ: ನಟ ಸುದೀಪ್ ಯುದ್ಧಕ್ಕೆ ಸಿದ್ಧ ಎಂದದ್ದು ಅಭಿಮಾನಿಗಳಿಗಾ ಅಥವಾ ದೃಶ್ಯಮಾಧ್ಯಮಗಳಿಗಾ?

“ನಿರ್ಮಾಪಕರನ್ನು ಅಣ್ಣಾವ್ರು ಅನ್ನದಾತರು ಎಂದು ಕರೆಯುತ್ತಿದ್ದರು. ಆ ಮಾತು ರಮೇಶ್ ರೆಡ್ಡಿ ಅವರಿಗೆ ನಿಜವಾಗಿಯೂ ಒಪ್ಪುತ್ತದೆ. ಅರ್ಜುನ್ ಜನ್ಯ ಅವರ ಕಾರ್ಯವೈಖರಿ ಬಗ್ಗೆ ಎಷ್ಟು ಹೇಳಿದರೂ ಕಡಿಮೆ‌. ಶಿವಣ್ಣನಿಗೆ ಶಿವಣ್ಣ ಅವರೇ ಸರಿಸಾಟಿ. ಶಿವಣ್ಣ ಹಾಗೂ ರಾಜ್ ಬಿ ಶೆಟ್ಟಿ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ. ಚಿತ್ರ ಡಿಸೆಂಬರ್ 25 ರಂದು ತೆರೆಗೆ ಬರುತ್ತಿದೆ. ನೋಡಿ, ಪ್ರೋತ್ಸಾಹ ನೀಡಿ” ಎಂದರು ನಟ ಉಪೇಂದ್ರ.

ಮೂರು ವರ್ಷಗಳ ಶ್ರಮವನ್ನು ಈ ಸಿನಿಮಾಗೆ ಹಾಕಿರುವ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಚಿತ್ರವನ್ನು ಬಹಳ ಪ್ರೀತಿಯಿಂದ ನಿರ್ಮಾಣ ಮಾಡಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ನಟ ರಾಜ್ ಬಿ ಶೆಟ್ಟಿ, “ಆರೋಗ್ಯದ ಸಮಸ್ಯೆ ಇದ್ದಾಗಲೂ ಚಿತ್ರವನ್ನು ಪೂರ್ಣ ಮಾಡಿದ ಶಿವರಾಜಕುಮಾರ್ ಹಾಗೂ ಅವರ ಕುಟುಂಬಕ್ಕೆ ಧನ್ಯವಾದ. ಶಿವರಾಜಕುಮಾರ್, ಉಪೇಂದ್ರ ಹಾಗೂ ನಾನು ಮೂವರು ಈ ಚಿತ್ರದಲ್ಲಿ ನಟಿಸಿದ್ದೇವೆ. ಆದರೆ ನಾನು ಎಂದಿಗೂ ಶಿವರಾಜಕುಮಾರ್ ಹಾಗೂ ಉಪೇಂದ್ರ ಅವರ ಅಭಿಮಾನಿ” ಎಂದರು.

ಕರ್ನಾಟಕದಲ್ಲಿ ಈ ಚಿತ್ರವನ್ನು ದೊಡ್ಡಮಟ್ಟದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. 24 ರಂದು ಪ್ರೀಮಿಯರ್ ಶೋ ಗಳು ಇರುತ್ತದೆ‌ ಎಂದು ವಿತರಕ ಸುಪ್ರೀತ್ ಹೇಳಿದರು. ಚಿತ್ರದಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ, ಛಾಯಾಗ್ರಾಹಕ ಸತ್ಯ ಹೆಗಡೆ, ವಿಎಫ್ಎಕ್ಸ್ ತಂತ್ರಜ್ಞ ಯಶ್ ಶೆಟ್ಟಿ, ಫರ್ನಸ್ ಇರಾನ್ ಮತ್ತು ತಂಡದವರು ಚಿತ್ರದ ಕುರಿತು ಮಾತನಾಡಿದರು.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...