ಸಾಮಾಜಿಕ ಕಳಕಳಿಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಸೂಚನೆ

Date:

ಆಳವಾದ ಅಸಮಾನತೆ ಮತ್ತು ಜಾತಿ ಶೋಷಣೆಯ ವಿರುದ್ಧ ದನಿ ಎತ್ತಿರುವ, ನಟ ದುನಿಯಾ ವಿಜಯ್ ಮುಖ್ಯಭೂಮಿಕೆಯ ‘ಲ್ಯಾಂಡ್ ಲಾರ್ಡ್’ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.

- Advertisement -

​ನಟ ದುನಿಯಾ ವಿಜಯ್ ನೇತೃತ್ವದ ಚಿತ್ರತಂಡವು ಮುಖ್ಯಮಂತ್ರಿಗಳನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು. ಗ್ರಾಮೀಣ ಭಾರತದ ಊಳಿಗಮಾನ್ಯ ಪದ್ಧತಿಯ ಕರಾಳತೆ ಹಾಗೂ ಶೋಷಿತ ವರ್ಗದ ಮೇಲಿನ ದೌರ್ಜನ್ಯವನ್ನು ಈ ಚಿತ್ರದಲ್ಲಿ ನೈಜವಾಗಿ ಕಟ್ಟಿಕೊಡಲಾಗಿದೆ. ಇದು ಕೇವಲ ಮನರಂಜನಾತ್ಮಕ ಚಿತ್ರವಾಗಿರದೆ, ಸಮಾಜದ ಕಣ್ಣು ತೆರೆಸುವ ಪ್ರಯತ್ನವಾಗಿದೆ ಎಂದು ಚಿತ್ರತಂಡವು ಮುಖ್ಯಮಂತ್ರಿಗಳ ಗಮನಕ್ಕೆ ತಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ| ₹100 ತೆರಿಗೆಯಲ್ಲಿ ₹5 ಕೂಡ ವಾಪಸು ಸಿಗ್ತಿಲ್ಲ; ರಾಜ್ಯಕ್ಕೆ ಮೋದಿ ಮುಂದುವರೆಸಿದ ಅಗಾಧ ಅನ್ಯಾಯ!

​ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, “ಸಾಮಾಜಿಕ ಪಿಡುಗುಗಳ ವಿರುದ್ಧ ಜಾಗೃತಿ ಮೂಡಿಸುವ ಇಂತಹ ಉತ್ತಮ ಸಂದೇಶವುಳ್ಳ ಚಿತ್ರಗಳಿಗೆ ಸರ್ಕಾರದ ಪ್ರೋತ್ಸಾಹ ಸದಾ ಇರುತ್ತದೆ,” ಎಂದು ಅಭಿಪ್ರಾಯಪಟ್ಟರು. ಕೂಡಲೇ ಈ ಕುರಿತು ಪರಿಶೀಲಿಸಿ, ನಿಯಮಾನುಸಾರ ಮನರಂಜನಾ ತೆರಿಗೆಯಿಂದ ವಿನಾಯಿತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆರ್ಥಿಕ ಮತ್ತು ವಾರ್ತಾ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

​ಈ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕರು ಹಾಗೂ ತಂತ್ರಜ್ಞರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ...

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...