ರಾಜ್‌ಕುಮಾರ್ ಸರಳತೆ, ಸಂಸ್ಕಾರದ ರಾಯಭಾರಿ ; ಸಿಎಂ ಸಿದ್ದರಾಮಯ್ಯ

Date:

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸನ್ಮಾನ

ಮುಖ್ಯಮಂತ್ರಿ ಆಗಲು ಸಮಾಜದ ಕೊಡುಗೆ ಕಾರಣ ಎಂದ ಸಿದ್ದರಾಮಯ್ಯ

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಡಾ.ರಾಜ್‌ಕುಮಾರ್ ಅಕಾಡೆಮಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಾಜ್ಯಕ್ಕೆ ಕೀರ್ತಿ ತಂದ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.

ಯುಪಿಎಸ್‌ಸಿಯಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳಿಗೆ ಸನ್ಮಾನ ಮಾಡಿ ಮಾತನಾಡಿರುವ ಸಿದ್ದರಾಮಯ್ಯ, “ಜಾತಿ ತಾರತಮ್ಯದ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾದವರು ಅಪಾರವಾಗಿದ್ದಾರೆ. ಅಂಥವರಿಗೆ ಶಿಕ್ಷಣದ ಜತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್‌ಸಿಯಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶ ಹಾಗೂ ಸಮಾಜದ ಪ್ರಗತಿಗೆ ಶ್ರಮಿಸಬೇಕು” ಎಂದು ಕಿವಿಮಾತು ಹೇಳಿದ್ದಾರೆ. ಇದೇ ವೇಳೆ ರಾಜ್ಯದ ಜನತೆಗೆ ಧನ್ಯವಾದ ತಿಳಿಸಿರುವ ಸಿದ್ದರಾಮಯ್ಯ, “ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರವಾಗಿದೆ” ಎಂದಿದ್ದಾರೆ.

ಇದೇ ವೇದಿಕೆಯಲ್ಲಿ ವರನಟ ರಾಜ್‌ಕುಮಾರ್‌ ಅವರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿರುವ ಸಿಎಂ, “ಡಾ. ರಾಜ್‌ಕುಮಾರ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ. ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವ ದೊಡ್ಡ ಸಂಸ್ಕಾರದ ರಾಯಭಾರಿ ಆಗಿದ್ದವರು. ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ. ನಾನು ಅವರನ್ನು ಭೇಟಿ ಮಾಡಲು ಹೋದಾಗಲೆಲ್ಲ ಬನ್ನಿ.. ಬನ್ನಿ.. ನಮ್ ಕಾಡಿನವರು ಎಂದು ಖುಷಿಯಿಂದ ಕರೆಯುತ್ತಿದ್ದರು. ನಾವಿಬ್ಬರೂ ಒಂದೇ ಜಿಲ್ಲೆಯವರು” ಎಂದು ಅಭಿಮಾನ ವ್ಯಕ್ತಪಡಿಸಿದ್ದಾರೆ.

“ಡಾ. ರಾಜ್‌ಕುಮಾರ್ ಅಕಾಡೆಮಿ ಯಶಸ್ಸು ಗಳಿಸಲು ರಾಘವೇಂದ್ರ ರಾಜ್‌ಕುಮಾರ್ ಮತ್ತು ಅಕಾಡೆಮಿ ಸಿಬ್ಬಂದಿಯ ಕೊಡುಗೆ ಅಪಾರವಿದೆ ಎಂದು” ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸಮಾರಂಭದಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿಗಳಾದ ಡಾ.ಶ್ರೀನಿವಾಸನ್, ಮಾಜಿ ಲೆಫ್ಟಿನೆಂಟ್ ಜನರಲ್ ರಮೇಶ್ ಹಲಗಲಿ, ಕೆ.ಸತ್ಯನಾರಾಯಣ, ಕೃಷಿ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿಗಳಾದ ಕೆ.ನಾರಾಯಣಗೌಡ ಅವರುಗಳನ್ನು ಕೂಡ ಸನ್ಮಾನಿಸಲಾಗಿದೆ. ರಾಘವೇಂದ್ರ ರಾಜ್ ಕುಮಾರ್ ಹಾಗೂ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ವೇದಿಕೆಯಲ್ಲಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ-ಭಾರತ್‌ ವಿವಾದ : ಅಕ್ಷಯ್‌ ಕುಮಾರ್‌ ಸಮಯ ಸಾಧಕ ಬುದ್ಧಿಗೆ ಛೀಮಾರಿ ಹಾಕಿದ ನೆಟ್ಟಿಗರು

ಕೇಂದ್ರ ಸರ್ಕಾರ ದೇಶದ ಹೆಸರನ್ನು ಬದಲಿಸಲು ಮುಂದಾಗಿದೆ ಎಂಬ ಚರ್ಚೆ ಜೋರಾಗಿರುವ...

ಇದಾವುದು ಹೊಸ ಧರ್ಮ, ಸನಾತನ ಎಂದು ಪ್ರಶ್ನಿಸಿದ ಬಹುಭಾಷಾ ನಟ ಕಿಶೋರ್ ಕುಮಾರ್

ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ ಮನುಷ್ಯರನ್ನು ಮನುಷ್ಯರಾಗಿ...

‘ನಟಿ ರಮ್ಯಾ ಹೃದಯಾಘಾತದಿಂದ ನಿಧನ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು!

ಸುದ್ದಿ ನಿಜವೆಂದು ತಿಳಿದು ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದ ಹಲವಾರು ನೆಟ್ಟಿಗರು 'ಅವರು...

ಚಿಕ್ಕಮಗಳೂರು | ಬೈಕ್‌ಗೆ ಕಾರು ಢಿಕ್ಕಿ; ಕಾರು ನಟ ಚಂದ್ರಪ್ರಭಗೆ ಸೇರಿದ್ದೆಂದು ಆರೋಪ

ಚಿಕ್ಕಮಗಳೂರಿನಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು, ಅಪಘಾತವಾಗಿರುವ ಘಟನೆ ನಡೆದಿದೆ....