ಕೊರಳಿಗೆ ಲಕ್ಷ್ಮಿದೇವಿ ಹಾರ ಧರಿಸಿದ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

Date:

  • ʼಲ್ಯಾಕ್ಮೇ ಫ್ಯಾಶನ್‌ ಶೋʼನಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದ ತಾಪ್ಸಿ ಪನ್ನು
  • ಹಿಂದೂಗಳ ಧಾರ್ಮಿಕ ಭಾವನೆ ಧಕ್ಕೆ ಉಂಟಾಯ್ತು ಎಂದು ದೂರು ದಾಖಲು

ಲಕ್ಷ್ಮಿದೇವಿಯ ಚಿತ್ರವಿರುವ ಚಿನ್ನದ ಹಾರವನ್ನು ಹಾಕಿಕೊಂಡು ಫ್ಯಾಶನ್‌ ಶೋವೊಂದರಲ್ಲಿ ಭಾಗವಹಿಸಿದ್ದಕ್ಕಾಗಿ ಬಹುಭಾಷಾ ನಟಿ ತಾಪ್ಸಿ ಪನ್ನು ಅವರ ವಿರುದ್ಧ ಮಧ್ಯಪ್ರದೇಶದ ಇಂದೋರ್‌ ಕ್ಷೇತ್ರದ ಬಿಜೆಪಿ ಶಾಸಕಿಯ ಪುತ್ರ ದೂರು ದಾಖಲಿಸಿದ್ದಾರೆ.

ನಟಿ ತಾಪ್ಸಿ ಪನ್ನು, ಮಾರ್ಚ್‌ 12ರಂದು ಮುಂಬೈನಲ್ಲಿ ನಡೆದ ʼಲ್ಯಾಕ್ಮೇ ಫ್ಯಾಶನ್‌ ವೀಕ್‌ʼನಲ್ಲಿ ಭಾಗವಹಿಸಿದ್ದರು. ಕೆಂಪು ಉಡುಗೆ ತೊಟ್ಟು, ಕೊರಳಲ್ಲಿ ಲಕ್ಷ್ಮಿ ಚಿತ್ರವಿರುವ ಚಿನ್ನದ ಹಾರವನ್ನು ಹಾಕಿಕೊಂಡು ಫ್ಯಾಶನ್‌ ಶೋನಲ್ಲಿ ಹೆಜ್ಜೆ ಹಾಕಿದ್ದ ತಾಪ್ಸಿ, ಜನರ ಗಮನ ಸೆಳೆದಿದ್ದರು. ಆ ಕ್ಷಣದ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲೂ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಮಧ್ಯಪ್ರದೇಶದ ಇಂದೋರ್‌ ಶಾಸಕಿ ಮಾಲಿನಿ ಗೌರ್‌ ಅವರ ಪುತ್ರ ಏಕ್‌ಲವ್ಯ, “ಕೊರಳಲ್ಲಿ ʼಲಕ್ಷ್ಮೀದೇವಿʼಯ ಚಿತ್ರವಿರುವ ಹಾರವನ್ನು ಹಾಕಿಕೊಂಡು ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಾಪ್ಸಿ ಪನ್ನು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ. ಸನಾತನ ಧರ್ಮವನ್ನು ಅವಮಾನಿಸುವ ಸಲುವಾಗಿ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿದ್ದಾರೆ” ಎಂದು ಆರೋಪಿಸಿ ಛತ್ರಿಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಟಾಲಿವುಡ್‌ನಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್‌

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಛತ್ರಿಪುರ ಪೊಲೀಸ್‌ ಠಾಣೆಯ ಮುಖ್ಯ ಅಧಿಕಾರಿ ಕಪಿಲ್‌ ಶರ್ಮಾ, “ನಟಿ ತಾಪ್ಸಿ ಪನ್ನು ಅವರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಏಕ್‌ಲವ್ಯಾ ಅವರು ದೂರು ನೀಡಿದ್ದಾರೆ. ದೂರಿನನ್ವಯ ಕ್ರಮ ಜರುಗಿಸಲಿದ್ದೇವೆ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...