ಪುಷ್ಪಾ 2 ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರಿಗೆ ನೀಡಿರುವ ಜಾಮೀನಿನ ಷರತ್ತುಗಳನ್ನು ಕೋರ್ಟ್ ಸಡಿಲಿಸಿದ್ದು, ಪ್ರತಿ ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ.
ಆದರೆ ಅಗತ್ಯವಿದ್ದಾಗ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮುಂದೆ ಹಾಜರಾಗಬೇಕು ಎಂಬ ಷರತ್ತನ್ನು ವಿಧಿಸಿರುವ ಕೋರ್ಟ್ ನಟ ಅಲ್ಲು ಅರ್ಜುನ್‌ಗೆ ವಿದೇಶಕ್ಕೆ ಪ್ರಯಾಣಿಸಲು ಅನುಮತಿ ನೀಡಿದೆ. ಹಾಗತೆಯೇ ಚಾರ್ಜ್‌ಶೀಟ್ ಸಲ್ಲಿಸುವವರೆಗೆ ಪ್ರತಿ ಬಾರಿ ಪ್ರವಾಸ ಮಾಡುವಾಗಲೂ ಪ್ರಯಾಣದ ಬಗ್ಗೆ ಎಚ್‌ಎಸ್‌ಒಗೆ ತಿಳಿಸಬೇಕು, ವಾಸಿಸುವ ಸ್ಥಳದ ವಿವರಗಳನ್ನು ಒದಗಿಸಬೇಕು ಎಂದು ನಿರ್ದೇಶಿಸಲಾಗಿದೆ.
ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ | ಅಭಿಮಾನಿಗಳ ಜವಾಬ್ದಾರಿ ಸೆಲೆಬ್ರೆಟಿಗಳದ್ದು, ಯಾವುದೇ ರಾಜಿಯಿಲ್ಲ: ರೇವಂತ್ ರೆಡ್ಡಿ
ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ನಟ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಜನವರಿ 10ರಂದು ಹೊರಡಿಸಲಾದ ಆದೇಶದಲ್ಲಿ ಇತರೆ ಷರತ್ತುಗಳನ್ನು ಬದಲಾಯಿಸಲಾಗಿಲ್ಲ.
ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪಾ 2 ಪ್ರದರ್ಶನದ ಸ್ಥಳಕ್ಕೆ ನಟ ಅಲ್ಲು ಅರ್ಜುನ್ ಭೇಟಿ ನೀಡಿದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಈ ಪೈಕಿ ಓರ್ವ ಬಾಲಕ ಇನ್ನೂ ಕೂಡಾ ಆಸ್ಪತ್ರೆಯಲ್ಲೇ ದಾಖಲಾಗಿದ್ದಾನೆ.
ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ | ಗಾಯಾಳು ಬಾಲಕನ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ
ಈ ಪ್ರಕರಣಕ್ಕೆ ಸಂಬಂಧಿಸಿ ನಟ ಅಲ್ಲು ಬಂಧನ ಮಾಡಲಾಗಿದ್ದು, ಅದೇ ದಿನ (ಜನವರಿ 3ರಂದು) ಅಲ್ಲು ಅರ್ಜುನ್‌ಗೆ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಎರಡು ತಿಂಗಳವರೆಗೆ ಅಥವಾ ಚಾರ್ಜ್‌ಶೀಟ್ ಸಲ್ಲಿಸುವವರೆಗೆ (ಯಾವುದು ಮೊದಲು ಅದು ಅನ್ವಯ) ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಹಾಗೆಯೇ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಅವರು ದೇಶವನ್ನು ತೊರೆಯುವುದನ್ನು ಸಹ ನಿಷೇಧಿಸಲಾಗಿತ್ತು. ಆದರೆ ಈಗ ಷರತ್ತು ಸಡಿಲಿಕೆ ಮಾಡಲಾಗಿದೆ.
