ಚುನಾವಣೆ ಹೊತ್ತಲ್ಲೂ ಸಖತ್‌ ಸದ್ದು ಮಾಡುತ್ತಿರುವ ʼಡೇರ್‌ಡೆವಿಲ್‌ ಮುಸ್ತಫಾʼ

Date:

ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆ ಆಧರಿಸಿದ ಚಿತ್ರ

- Advertisement -

ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ ಅಪರೂಪದ ಚಿತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ‘ಡೇರ್‌ಡೆವಿಲ್‌ ಮುಸ್ತಫಾ’ ಕಿರುಕಥೆಯನ್ನು ಆಧರಿಸಿ ಅದೇ ಶಿರ್ಷಿಕೆ ಅಡಿಯಲ್ಲಿ ಸಿದ್ಧಗೊಂಡಿರುವ ‘ಡೇರ್‌ ಡೆವಿಲ್‌ ಮುಸ್ತಫಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ಟ್ರೈಲರ್‌ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಅವರ ಅಭಿಮಾನಿಗಳೇ ಹಣ ಹೂಡಿ ನಿರ್ಮಿಸಿರುವ ಈ ಚಿತ್ರವನ್ನು ಮೂಲ ಕಥೆಗೆ ಧಕ್ಕೆಯಾಗದ ರೀತಿಯಲ್ಲಿ ತೆರೆಗೆ ಅಳವಡಿಸಿದ್ದಾರೆ ಯುವ ನಿರ್ದೇಶಕ ಶಶಾಂಕ್‌ ಸೋಗಾಲ್‌. ಈ ಹಿಂದೆ ʼಫಟಿಂಗʼ ಎಂಬ ಜನಪ್ರಿಯ ಕಿರುಚಿತ್ರ ನಿರ್ದೇಶಿಸಿದ್ದ ಶಶಾಂಕ್, ʼಡೇರ್‌ಡೆವಿಲ್‌ ಮುಸ್ತಫಾʼ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ʼಡಾ. ಬ್ರೋʼ ಖ್ಯಾತಿಯ ಯುಟ್ಯೂಬರ್‌ ಗಗನ್‌ ಈ ಚಿತ್ರದ ನಿರೂಪಣೆಗೆ ಧ್ವನಿಯಾಗುವ ಮೂಲಕ ತೇಜಸ್ವಿ ಪ್ರಪಂಚವನ್ನು ಕನ್ನಡದ ಸಿನಿ ರಸಿಕರ ಪರಿಚಯ ಮಾಡಿಸುವ ವಿಶೇಷ ಪ್ರಯತ್ನ ಮಾಡಿದ್ದಾರೆ. ಚಿತ್ರತಂಡದ ಭಿನ್ನ ಪ್ರಚಾರತಂತ್ರ ಭಾರೀ ಮೆಚ್ಚುಗೆ ಗಳಿಸಿದೆ.

ಡೇರ್‌ಡೆವಿಲ್‌ ಮುಸ್ತಫಾ ಮತ್ತು ರಾಮಾನುಜ ಅಯ್ಯಂಗಾರಿ ಪಟಾಲಂನ ನಡುವಿನ ಇರಿಸುಮುರಿಸಿನ ಕಥೆಯಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅಬಚೂರು ಶಾಲೆಯ ಮುಖ್ಯ ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು, ಸುಂದರ್‌ ವೀಣಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಯುವ ಪ್ರತಿಭೆ ಶಿಶಿರ್‌ ಬೈಕಾಡಿ ಮುಸ್ತಫಾನ ಪಾತ್ರದಲ್ಲಿ ಗಮನ ಸೆಳೆಯುತ್ತಿದ್ದು, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಿರೀಕ್ಷೆ ಹೆಚ್ಚಿಸಿದ ʼಆದಿಪುರುಷ್‌ʼ ಟ್ರೈಲರ್‌

ನವನೀತ್‌ ಶ್ಯಾಮ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದು, ʼನಿನ್ನಂಥೋರ್ ಯಾರೂ ಇಲ್ವಲ್ಲೋʼ ಎಂಬ ಅನಿಮೇಷನ್‌ ಹಾಡು ಈಗಾಗಲೇ ಭಾರೀ ಜನಪ್ರಿಯತೆ ಗಳಿಸಿದೆ. ಅಣ್ಣಾವ್ರ ಅನಿಮೇಷನ್‌ ಹೊಂದಿರುವ ಈ ಹಾಡಿಗೆ ವಾಸುಕಿ ವೈಭವ್‌ ಮತ್ತು ಸಿದ್ಧಾರ್ಥ್‌ ಬೆಳ್ಮಣ್ಣು ಧ್ವನಿಯಾಗಿದ್ದಾರೆ.

ತೇಜಸ್ವಿ ಅವರ ಅಭಿಮಾನಿಗಳಿಂದಲೇ ತಯಾರಾಗಿರುವ ಚಿತ್ರಕ್ಕೆ ನಟ, ಸಾಹಿತ್ಯಾಸಕ್ತ ಡಾಲಿ ಧನಂಜಯ್ ಕೂಡ ಬೆಂಬಲವಾಗಿ ನಿಂತಿದ್ದಾರೆ. ತಮ್ಮ ಒಡೆತನದ ಡಾಲಿ ಪಿಕ್ಚರ್ಸ್‌ ಮೂಲಕ ಈ ಚಿತ್ರವನ್ನು ಪ್ರಸ್ತುತಪಡಿಸುವ ಜವಾಬ್ದಾರಿಯನ್ನು ಧನಂಜಯ್‌ ಹೊತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...