‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

Date:

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಕಥೆ ಆಧಾರಿತ ಸಿನಿಮಾ ‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರ ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಪ್ರೇಮಿಗಳು ಮಾತ್ರವಲ್ಲದೆ ವಿಮರ್ಶಕರಿಂದಲೂ ಮೆಚ್ಚುಗೆ ಪಡೆದು ಯಶಸ್ವಿಯಾಗಿ ನಾಲ್ಕನೆ ವಾರ ಪ್ರದರ್ಶನ ಕಾಣುತ್ತಿದೆ.

ಈ ನಡುವೆ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ವಿನಾಯಿತಿ ನೀಡುವಂತೆ ಚಿತ್ರತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ಚಿತ್ರಕಥಾ ಲೇಖಕ ಅನಂತ್, ನಿರ್ದೇಶಕ ಶಶಾಂಕ್ ಹಾಗೂ ಚಿಂತಕ ಪ್ರೊ.ನಟರಾಜ್ ಹುಳಿಯಾರ್ ಸೇರಿದಂತೆ ಚಿತ್ರತಂಡದ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.  

ಇದಲ್ಲದೆ ಕೆಲವು ದಿನಗಳ ಹಿಂದಷ್ಟೆ ʼಡೇರ್‌ ಡೆವಿಲ್‌ ಮುಸ್ತಾಫಾʼ ಸಿನಿಮಾ ತಂಡ ಮತ್ತಷ್ಟು ಪ್ರೇಕ್ಷಕರನ್ನು ಸೆಳೆಯಲು ಸಿನಿಮಾದ ಟಿಕೆಟ್‌ ದರವನ್ನು ಕಡಿಮೆಗೊಳಿಸಿದೆ. ಜೂನ್ 6ರಿಂದ ಚಿತ್ರಮಂದಿರಗಳಲ್ಲಿ ಸಿನಿಮಾದ ಸಾಮಾನ್ಯ ಟಿಕೆಟ್‌ ದರ 50 ರೂಪಾಯಿ ಮತ್ತು ಬಾಲ್ಕನಿ ಟಿಕೆಟ್‌ ದರ 70 ರೂಪಾಯಿ ಆಗಲಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್‌ ದರವನ್ನು 99 ರೂಪಾಯಿಗೆ ಕಡಿಮೆಗೊಳಿಸಲಾಗಿದೆ. ಎಲ್ಲರಿಗೂ ಕೈಗೆಟುಕುವ ದರದಲ್ಲಿ ಎಲ್ಲರ ನೆಚ್ಚಿನ ಸಿನಿಮಾದ ಟಿಕೆಟ್‌ ನೀಡಲಾಗುತ್ತಿದೆ. 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ರಾಜ್ಯ ಹಾಗೂ ಹೊರ ದೇಶದಲ್ಲಿ 80ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಲ್ಕನೇ ವಾರವೂ ತುಂಬಿದ ಪ್ರದರ್ಶನ ಕಾಣುತ್ತಿದೆ. ನ್ಯೂಜಿಲೆಂಡ್, ಆಸ್ಟ್ರೇಲಿಯಾ, ದುಬೈ, ಅಮೆರಿಕಾ, ಯುರೋಪ್ ದೇಶದಲ್ಲಿಯೂ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? 2024ರಲ್ಲಿ ಮೋದಿ ಗೆದ್ದರೆ ನರೇಂದ್ರ ಪುಟಿನ್‌ ಆಗುತ್ತಾರೆ; ಪಂಜಾಬ್‌ ಸಿಎಂ ಭಗವಂತ್ ಮಾನ್

ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಸಿನಿಮಾವನ್ನು ನಟ ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ. ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತ ನೀಡಿದ್ದಾರೆ.

ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ. ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರು ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಅಭಿನಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...