ಪ್ರೇಕ್ಷಕರನ್ನು ಸೆಳೆಯಲು ಟಿಕೆಟ್‌ ದರ ತಗ್ಗಿಸಿದ ʼಡೇರ್‌ಡೆವಿಲ್‌ ಮುಸ್ತಾಫಾʼ ಚಿತ್ರತಂಡ

Date:

ಮೂರನೇ ವಾರವೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಚಿತ್ರ

ವಿದೇಶಗಳಲ್ಲೂ ಸದ್ದು ಮಾಡಿದ ಪೂರ್ಣಚಂದ್ರ ತೇಜಸ್ವಿ ಕಥೆ

ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಿರುಕತೆಯನ್ನು ಆಧರಿಸಿ ತೆರೆಗೆ ಬಂದಿರುವ ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಮೂರನೇ ವಾರವೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ಮತ್ತಷ್ಟು ಪ್ರೇಕ್ಷಕರನ್ನು ಸೆಳೆಯಲು ಚಿಂತನೆ ನಡೆಸಿರುವ ಚಿತ್ರತಂಡ ಸಿನಿಮಾದ ಟಿಕೆಟ್‌ ದರವನ್ನು ತಗ್ಗಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿತ್ರದ ನಿರ್ದೇಶಕ ಶಶಾಂಕ್‌ ಸೋಗಾಲ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ವಿಶೇಷ ಪೋಸ್ಟರ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದು, “ಮೇ 6ರಿಂದ ಚಿತ್ರಮಂದರಿಗಳಲ್ಲಿ ಸಿನಿಮಾದ ಸಾಮಾನ್ಯ ಟಿಕೆಟ್‌ ದರ 50 ರೂಪಾಯಿ ಮತ್ತು ಬಾಲ್ಕನಿ ಟಿಕೆಟ್‌ ದರ 70 ರೂಪಾಯಿ ಇರಲಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್‌ ದರವನ್ನು 99 ರೂಪಾಯಿಗೆ ತಗ್ಗಿಸಲಾಗಿದೆ. ಕೈಗೆಟುಕುವ ದರದಲ್ಲಿ ಎಲ್ಲರ ನೆಚ್ಚಿನ ಸಿನಿಮಾದ ಟಿಕೆಟ್‌ ನೀಡಲಾಗುತ್ತಿದೆ” ಎಂದಿದ್ದಾರೆ.

ವಿದೇಶದಲ್ಲಿರುವ ಕನ್ನಡಿಗರು ಮತ್ತು ತೇಜಸ್ವಿ ಅವರ ಅಭಿಮಾನಿಗಳ ಬೇಡಿಕೆಯ ಹಿನ್ನೆಲೆ ಎರಡನೇ ವಾರದ ಹೊತ್ತಿಗೆ ಈ ಚಿತ್ರವನ್ನು ಸಾಗರದಾಚೆಗೂ ಬಿಡುಗಡೆ ಮಾಡಲಾಗಿತ್ತು. ಅಮೆರಿಕಾ, ಲಂಡನ್‌, ಅಬುದಾಬಿ, ಆಸ್ಟ್ರೇಲಿಯಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಸದ್ಯ ‘ಡೇರ್‌ಡೆವಿಲ್‌ ಮುಸ್ತಾಫಾ’ ಸದ್ದು ಮಾಡುತ್ತಿದ್ದಾನೆ.

ಮುಸ್ತಾಫಾ ಮತ್ತು ರಾಮಾನುಜ ಅಯ್ಯಂಗಾರಿ ಪಟಾಲಂನ ನಡುವಿನ ಇರಿಸುಮುರಿಸಿನ ಕಥೆಯಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅಬಚೂರು ಕಾಲೇಜಿನ ಪ್ರಾಂಶುಪಾಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು, ಸುಂದರ್‌ ವೀಣಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಯುವ ಪ್ರತಿಭೆ ಶಿಶಿರ್‌ ಬೈಕಾಡಿ ಮುಸ್ತಫಾನ ಪಾತ್ರದಲ್ಲಿ ಗಮನ ಸೆಳೆಯುತ್ತಿದ್ದು, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ನವನೀತ್‌ ಶ್ಯಾಮ್‌ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ತೇಜಸ್ವಿ ಅವರ ಅಭಿಮಾನಿಗಳಿಂದಲೇ ನಿರ್ಮಿಸಿರುವ ಈ ಚಿತ್ರಕ್ಕೆ ನಟ, ಸಾಹಿತ್ಯಾಸಕ್ತ ಡಾಲಿ ಧನಂಜಯ್ ಬೆಂಬಲವಾಗಿ ನಿಂತಿದ್ದು, ತಮ್ಮ ಒಡೆತನದ ʼಡಾಲಿ ಪಿಕ್ಚರ್ಸ್‌ʼ ಬ್ಯಾನರ್‌ನಡಿಯಲ್ಲಿ ಪ್ರಸ್ತುತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...