ದರ್ಶನ್ ಪ್ರಕರಣ | ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ ಎಂದು ವರದಿಯಾಗಿದೆ. ದೋಷಾರೋಪ ಪಟ್ಟಿಯಲ್ಲಿ ನಟ ದರ್ಶನ್‌ ಎ2 ಆರೋಪಿಯೆಂದೇ ಉಲ್ಲೇಖಿಸಲಾಗಿದೆ.

- Advertisement -

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮೂರು ತಿಂಗಳುಗಳಿಂದ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಜೈಲಿನಲ್ಲಿದ್ದಾರೆ. ಪ್ರಕರಣದ ತನಿಖೆ ನಡೆಸಿರುವ ಎಸಿಪಿ ಚಂದನ್ ನೇತೃತ್ವದ ತಂಡವು ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿ, ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಪ್ರಕರಣದಲ್ಲಿ ಆರೋಪಿಗಳ ಪಾತ್ರವನ್ನು ವಿವರಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

10 ಕಡತ 7 ಸಂಪುಟಗಳನ್ನು ಒಳಗೊಂಡಿರುವ ಚಾರ್ಜ್‌ಶೀಟ್‌ನಲ್ಲಿ 231 ಜನರಿಂದ ಸಂಗ್ರಹಿಸಲಾದ ಸಾಕ್ಷಗಳು, ಸಿಸಿ ಟಿವಿ ಫೂಟೇಜ್, ಎಫ್‌ಎಸ್‌ಎಲ್ ರಿಪೋರ್ಟ್ ಹಾಗೂ 27 ಜನರಿಂದ ಪಡೆದ 164 ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ತನ್ನ ಸ್ನೇಹಿತೆ, ನಟಿ ಪವಿತ್ರಾಗೌಡಗೆ ವಾಟ್ಸಾಪ್‌ನಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದಾರೆಂಬ ಕಾರಣಕ್ಕಾಗಿ ರೇಣುಕಸ್ವಾಮಿಯನ್ನು ನಟ ದರ್ಶನ್‌ ಗ್ಯಾಂಗ್ ಅಪಹರಿಸಿ, ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ನಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆಗೊಳಗಾಗಿದ್ದ ರೇಣುಕಸ್ವಾಮಿ ಸಾವನ್ನಪ್ಪಿದ್ದು, ಆತನ ಮೃತದೇಹವನ್ನು ಮೋರಿಗೆ ಬಿಸಾಕಲಾಗಿತ್ತು ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ನಟಿ ಪವಿತ್ರಾಗೌಡ ಎ1 ಮತ್ತು ನಟ ದರ್ಶನ್‌ ಎ2 ಆರೋಪಿಗಳಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...